News Kannada
Sunday, September 25 2022

ಕರ್ನಾಟಕ

ಮಂಡ್ಯದಲ್ಲಿ ಬೇಡಿಕೆ ಈಡೇರಿಕೆಗಾಗಿ ಪ್ರತ್ಯೇಕ ಪ್ರತಿಭಟನೆ - 1 min read

Photo Credit :

ಮಂಡ್ಯದಲ್ಲಿ ಬೇಡಿಕೆ ಈಡೇರಿಕೆಗಾಗಿ ಪ್ರತ್ಯೇಕ ಪ್ರತಿಭಟನೆ

ಮಂಡ್ಯ : ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲ ಕಾಲ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಬಾರದು, ಎಪಿಎಂಸಿ ಕಾಯಿದೆ ವಾಪಸ್ಸು ಪಡೆಯಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ರೈತ ವಿರೋಧಿ ಬಿತ್ತನೆ ಬೀಜ ಕಾಯಿದೆಯನ್ನು ಜಾರಿಗೆ ತರಬಾರದು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಜನವಿರೋಧಿ ಕಾಯಿದೆಗಳನ್ನು ಜಾರಿಗೆ ತರುತ್ತಿದ್ದು, ಇದರಿಂದ ರೈತರು, ದಲಿತರು, ಕಾರ್ಮಿಕರು ಸೇರಿದಂತೆ ಇನ್ನಿತರೆ ಶ್ರಮಿಕರ ಜೀವನದ ಹಕ್ಕು ನಾಶವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಸಿ.ಎಸ್. ಪುಟ್ಟರಾಜು, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಬೊಮ್ಮೇಗೌಡ, ಲಿಂಗಪ್ಪಾಜಿ, ಎ.ಎಲ್. ಕೆಂಪೂಗೌಡ, ಶೆಟ್ಟಹಳ್ಳಿ ರವಿಕುಮಾರ್, ಕೆ.ಟಿ. ಗೋವಿಂದೇಗೌಡ, ಎಸ್.ಎನ್. ಸಿದ್ದೇಗೌಡ, ಇಂಡುವಾಳು ಸಿದ್ದೇಗೌಡ, ಕನ್ನಲಿ ಚಂದ್ರು, ಪಿ.ಕೆ.ನಾಗಣ್ಣ ಸೇರಿದಂತೆ ಇತರರು ಇದ್ದರು.

ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ರೈತ ಮತ್ತು ಭೂ ರಹಿತ ಕೃಷಿ ಕಾರ್ಮಿಕರ ಪರವಾಗಿದ್ದ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು, ಭೂಮಿಯ ಒಡೆತನವೂ ಸೇರಿದಂತೆ ರೈತ ಹಾಗೂ ಕೃಷಿ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದ್ದ ಕರ್ನಾಟಕ ಭೂಸುಧಾರಣಾ ಕಾಯಿದೆಯು ಇಡೀ ದೇಶಕ್ಕೆ ಮಾದರಿಯಾಗಿದೆ. ಇಂತಹ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ರೈತ ವಿರೋಧಿಯಾಗಿದೆ. ಕಾಪೆರ್Çರೇಟ್ ಕಂಪನಿ ಹಾಗೂ ಬಂಡವಾಳ ಶಾಹಿಗಳ ಪರವಾದ ನಿಲುವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಭಾರತ ದೇಶ ಆಹಾರದ ಸಮಸ್ಯೆಯಲ್ಲಿ ಸಿಲುಕಿದ್ದು, ಕೃಷಿ ಭೂಮಿಯ ನಾಶದಿಂದ ಆಹಾರದ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುತ್ತದೆ. ಬಡಜನರು ಹಸಿವಿನ ಸಂಕಷ್ಟಕ್ಕೊಳಗಾಗಿ ರಾಜ್ಯ ಹಾಗೂ ಇಥಿಯೋಪಿಯಾದಂತಹ ದಾರುಣ ಸ್ಥಿತಿಗೆ ತಲುಪಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವ ಪ್ರಸ್ತಾಪವನ್ನು ಗ್ರಾಮೀಣ ರೈತ ಕೃಷಿ ಕಾರ್ಮಿಕರ ಹಾಗೂ ಬಡಜನರ ಹಿತದೃಷ್ಠಿಯಿಂದ ಕೈಬಿಟ್ಟು ಭೂ ರಹಿತ, ಕೃಷಿ ಕಾರ್ಮಿಕರು ಮತ್ತು ಅರಣ್ಯವಾಸಿಗಳು ಭೂಹಕ್ಕಿನ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಅಂದಾನಿ ಸೋಮನಹಳ್ಳಿ, ಹನುಮಂತು ಕೋಣನಹಳ್ಳಿ, ಹರಿಕುಮಾರ, ಉಮೇಶ, ಎಂ.ಎಸ್. ಗೀತಾ, ಗೋವಿಂದ, ಮಹಾದೇವ, ಜಯಶಂಕರ್, ರಮೇಶ್, ಶಿವು, ಮಹೇಶ, ಮಂಜು ಕ್ಯಾತನಹಳ್ಳಿ, ಕದಂಬ ಸೈನ್ಯದ ಬೇಕ್ರಿ ರಮೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

See also  ದರ ಸಮರ: ವಿರಾಜಪೇಟೆ ಮೀನು ಮಾರುಕಟ್ಟೆಯಲ್ಲಿ ಮಾರಾಮಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು