News Kannada
Sunday, September 25 2022

ಕರ್ನಾಟಕ

ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ - 1 min read

Photo Credit :

ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಕಾರವಾರ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಮಾಡಿದ್ದ ಮುಂಡಗೋಡದ ಚೌಡಳ್ಳಿ ಗ್ರಾಮದ ಆರೋಪಿ ಸುಭಾಸ ರಾಜಪ್ಪ ತಹಸೀಲ್ದಾರ್ ನಿಗೆ ಎಫ್.ಟಿ.ಎಸ್.ಸಿ.-1 ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮದ ನಿವಾಸಿಯಾಗಿರುವ ಆರೋಪಿ ಸುಭಾಸ 2017ರ ಏಪ್ರಿಲ್29 ಗ್ರಾಮದ ಮಾವಿನ ತೋಟದಲ್ಲಿ ಅಪ್ರಾಪ್ತ ಬಾಲಕಿ ಒಬ್ಬಳೇ ಇರುವುದನ್ನು ಕಂಡು ತೋಟಕ್ಕೆ ಹೋಗಿ ಬಲಾತ್ಕಾರ ಮಾಡುವ ಉದ್ದೇಶದಿಂದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ದೌರ್ಜನ್ಯವೆಸಗಿದ್ದ.

ನೋವು ತಾಳಲಾರದೇ ನೊಂದ ಬಾಲಕಿ ಚೀರಾಡಿದಾಗ ಧ್ವನಿ ಕೇಳಿ ಆಕೆಯ ಅಜ್ಜಿ ತೋಟಕ್ಕೆ ಬರುತ್ತಿರುವುದನ್ನು ಕಂಡು ತಪ್ಪಿತಸ್ಥ ಪರಾರಿಯಾಗಿದ್ದ. ಅಪರಾಧದ ಕುರಿತಂತೆ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ಕುರಿತು ಅಂದಿನ ಸಿ.ಪಿ.ಐ. ಕಿರಣ ಕುಮಾರ ತನಿಖೆ ಜರುಗಿಸಿ ಐ.ಪಿ.ಸಿ. ಕಲಂ: 376, 506(1) ಹಾಗೂ ಪೋಕ್ಸೋ ಕಾಯಿದೆ ಕಲಂ: 4 ಮತ್ತು 10 ಅಡಿಯಲ್ಲಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸುದೀರ್ಘವಾಗಿ ವಿಚಾರಣೆ ನಡೆಸಿದ ಎಫ್.ಟಿ.ಎಸ್.ಸಿ.-1 ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿತನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತನಿಗೆ ಒಟ್ಟಿಗೆಯದಲ್ಲಿ ಜಾರಿಗೆ ಬರುವಂತೆ 10 ವರ್ಷ ಕಠಿಣ ಸೆರೆಮನೆವಾಸ ಹಾಗೂ 10 ಸಾವಿರ ರೂ. ದಂಡ ಭರಿಸಲು ತೀರ್ಪು ನೀಡಿದ್ದು ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಸುಭಾಷ ಪಿ. ಕೈರನ್ನ ವಾದ ಮಂಡಿಸಿದ್ದರು.

See also  ಲಾರಿ, ಬಸ್, ಸ್ಕಾರ್ಫಿಯೋ ನಡುವೆ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು