News Kannada
Saturday, October 01 2022

ಕರ್ನಾಟಕ

ರಾಜ್ಯದಲ್ಲಿ ಮತ್ತೊಮ್ಮೆ ಲಾಕೌಡೌನ್ ಇಲ್ಲ: ಆರ್. ಅಶೋಕ್ - 1 min read

Photo Credit :

ರಾಜ್ಯದಲ್ಲಿ ಮತ್ತೊಮ್ಮೆ ಲಾಕೌಡೌನ್ ಇಲ್ಲ: ಆರ್. ಅಶೋಕ್

ಹಾಸನ: ರಾಜ್ಯದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್‍ಡೌನ್ ಚಿಂತನೆ ರಾಜ್ಯ ಸಕಾರದ ಮುಂದಿಲ್ಲ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪುನಃ ಲಾಕ್ ಡೌನ್ ಮಾಡಿದರೆ ಬಡವರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತದೆ. ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಜುಲೈ 7ರ ನಂತರ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲಾಗುವುದು.  ದೇಶದಾದ್ಯಂತ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದರೂ ಸರ್ಕಾರ ಅದರ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ಹರಡುವುದನ್ನು ಆದಷ್ಟು ಕಡಿಮೆ ಮಾಡುವಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳೊಡನೆ ಸಾರ್ವಜನಿಕರು ಸಹಕರಿಸಿದರೆ ಮಾತ್ರವೇ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಮೊದಲು ಕೇವಲ ಹೊರರಾಜ್ಯಗಳಿಂದ ಬಂದವರಿಂದ ಸೋಂಕು ಹರಡುತ್ತಿತ್ತು. ಆದರೆ ಈಗ ಸ್ಥಳೀಯರಲ್ಲೇ ಸೋಂಕು ಪತ್ತೆಯಾಗುತ್ತಿರುವುದು ಕಂಡುಬಂದಿದೆ. ಮುಖ್ಯವಾಗಿ ಹೊರಗಡೆಯಿಂದ ಪ್ರವಾಸಿಗರು ಬರುತ್ತಿರುವುದರಿಂದ ಸ್ವಲ್ಪ ಕಾಲಾವಕಾಶ ನೀಡಿ ಜಿಲ್ಲಾದ್ಯಂತ ಎಲ್ಲ ರೆಸಾರ್ಟ್‍ಗಳನ್ನು ಮುಚ್ಚುವಂತೆ ಆದೇಶ ಮಾಡಲು ಜಿಲ್ಲಾಧಿಕಾರಿಯವರಿಗೆ ತಿಳಿಸಿದ್ದಾಗಿ ಹೇಳಿದರು.

ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಜನರು ತಾವಾಗಿಯೇ ಲಾಕ್ ಡೌನ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅಂತರ ಜಿಲ್ಲೆ ಪ್ರಯಾಣಿಕರಿಗೆ ತೊಂದರೆಯಾಗಬಹುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸಾರ್ವಜನಿಕರು ತಮ್ಮ ಹಳ್ಳಿಗಳನ್ನು ನಿರ್ದಿಷ್ಠ ಕಾರಣಕ್ಕಾಗಿ ಲಾಕ್‍ಡೌನ್ ಮಾಡಿಕೊಳ್ಳಬಹುದೇ ವಿನಃ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಯಾವುದೇ ಕಾರಣಕ್ಕೂ ಲಾಕ್‍ಡೌನ್ ಮಾಡಲಾಗುವುದಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಜಿಲ್ಲಾಧಿಕಾರಿಗಳು ಹಾಗೂ ವರಿಷ್ಠಾಧಿಕಾರಿಗಳು ಅದನ್ನು ತೆರವುಗೊಳಿಸುವರು ಎಂದು ಹೇಳಿದರು.

 

ಸಾಮಾಜಿಕ ಭದ್ರತಾ ಯೋಜನೆಯಡಿ ಸುಮಾರು ಏಳು ಸಾವಿರ ಕೋಟಿ ರೂಗಳನ್ನು ಪಿಂಚಣಿಗಾಗಿ ಬಿಡುಗಡೆ ಮಾಡಲಾಗುತ್ತದೆ. ಪ್ರಸ್ತುತ ಅಂಚೆ ಕಚೇರಿಗಳ ಮೂಲಕ ನೀಡಲಾಗುತ್ತಿರುವ ಪಿಂಚಣಿಗಳು ಮಾತ್ರ ತಡವಾಗುತ್ತಿವೆ, ಆದರೆ ಬ್ಯಾಂಕುಗಳ ಮೂಲಕ ಸರಿಯಾದ ಸಮಯಕ್ಕೆ ಪಿಂಚಣಿ ನೀಡಲಾಗುತ್ತಿದೆ ಎಂದರು.

ಇದೇ ವೇಳೆ ಶಾಸಕರಾದ ಪ್ರೀತಂ ಜೆ. ಗೌಡ, ಹೆಚ್.ಕೆ ಕುಮಾರಸ್ವಾಮಿ, ಲಿಂಗೇಶ್, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ ಇದ್ದರು.

See also  ಕ್ರೈಸ್ತರ ಅಭಿವೃದ್ಧಿಗೆ ಪ್ರತ್ಯೇಕ ಕ್ರಿಶ್ಚಿಯನ್ ಮಂಡಳಿ ಸ್ಥಾಪಿಸಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು