ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಓರ್ವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ತಂಡ ಗ್ರಾ.ಪಂ ಕಛೇರಿ ಸ್ಥಳಕ್ಕೆ ಭೇಟಿ ನೀಡಿ ಕಛೇರಿಯನ್ನು ಸೀಲ್‌ಡೌನ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಈ ವ್ಯಕ್ತಿಗೆ ತಲೆನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದರು. ಗುರುವಾರ ರಾತ್ರಿ ವರದಿ ಬಂದಾಗ ಸೋಂಕು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಶುಕ್ರವಾರ ಸ್ಥಳೀಯ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾ.ಪಂ ಕಛೇರಿಗೆ ಸಂಪೂರ್ಣ ಸ್ಯಾನಿಟೈಸ್ ಮಾಡಿ, ಮುಂಜಾಗೃತ ಕ್ರಮವಾಗಿ ಸೀಲ್‌ಡೌನ್ ಮಾಡಿದ್ದಾರೆ.
ಅವರ ಸಂಪರ್ಕದಲ್ಲಿದ್ದ ಇತರೆ ಸಿಬ್ಬಂದಿ ಮತ್ತು ಜನಪ್ರತಿನಿಧಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.