ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರವು ಉಲ್ಲೇಖಿತ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಪ್ರತಿ ದಿನ ರಾತ್ರಿ 8:00 ರಿಂದ ಬೆಳಿಗ್ಗೆ 5:00 ಗಂಟೆಯವರೆಗೆ ಅವಶ್ಯಕ ಕಾರಣಗಳಲ್ಲದ ಹೊರತು ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ. ಜುಲೈ 5 ಅಗಸ್ಟ 2ರವರೆಗೆ ಅನ್ವಯವಾಗುವಂತೆ ಪ್ರತಿ ರವಿವಾರದ ಪೂರ್ತಿ ದಿನದಂದು ಎಲ್ಲ ಪ್ರದೇಶಗಳಲ್ಲಿ ಸಂಪೂರ್ಣ ಲಾಕ್‌ಡೌನ್ ದಿನವೆಂದು ಘೋಷಿಸಿ ಅನಿವಾರ್ಯ ಕಾರಣಗಳಲ್ಲದ ಹೊರತು ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಸಂಪ್ರರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ಜುಲೈ5, 12, 19, 26 ಮತ್ತು ಅಗಸ್ಟ 2ರಂದು ಇರುವ ಭಾನುವಾರಗಳಂದು ಮದ್ಯ ಮಾರಾಟ ಹಾಗೂ ಮದ್ಯ ಸಾಗಾಟವನ್ನು ನಿಷೇಧಿಸಿ ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ. ಅಬಕಾರಿ ಉಪ-ಆಯುಕ್ತರು, ಗದಗ ಇವರು ತಮ್ಮ ವ್ಯಾಪ್ತಿಯಲ್ಲಿ ಆದೇಶವನ್ನು ಪರಿಣಾಮಕಾರಿಯಾಗಿ ಜ್ಯಾರಿಗೆ ಬರುವಂತೆ ಕ್ರಮ ಕೈಕೊಳ್ಳತಕ್ಕದ್ದು.
ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿದ ಭಾನುವಾರಗಳ ಹಿಂದಿನ ದಿನ ಅಂದರೆ ಶನಿವಾರ ರಾತ್ರಿ 08-00 ಗಂಟೆಯಿಂದ ಸೋಮವಾರ ಬೆಳಿಗ್ಗೆ 05-00 ಗಂಟೆಯವರೆಗೆ ನಿಷೇಧಾಜ್ಞೆ ಜ್ಯಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.