News Kannada
Wednesday, November 30 2022

ಕರ್ನಾಟಕ

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 95 ಕ್ಕೆ ಏರಿಕೆ - 1 min read

Photo Credit :

ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 95 ಕ್ಕೆ ಏರಿಕೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 3 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 95 ಕ್ಕೆ ಏರಿಕೆಯಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರು ಮಹರಾಷ್ಟ್ರದಿಂದ ಬಂದಿದ್ದು, ಇವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯ 77 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಇವರಲ್ಲಿ ಹೆಚ್ಚಿನ ಅನಾರೋಗ್ಯ ಕಂಡುಬಂದ ಕಾರಣ ಇವರನ್ನು ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ.

ವಿರಾಜಪೇಟೆ ತಾಲ್ಲೂಕು ಅರ್ಜಿ ಗ್ರಾಮದಲ್ಲಿ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ 8 ವರ್ಷದ ಮಗಳಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಹೊಸದಾಗಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.

ಒಟ್ಟು 95 ಮಂದಿ ಸೋಂಕಿತರಲ್ಲಿ 16 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. 78 ಮಂದಿಗೆ ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯ 37 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

See also  ಕೊಡಗಿನ ಮನೆಯಂಗಳದ ಬೆಡಗಿ ಡೆಲೀಯಾ ಮೆರಗು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು