News Kannada
Tuesday, December 06 2022

ಕರ್ನಾಟಕ

ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 184ಕ್ಕೆ ಏರಿಕೆ

Photo Credit :

ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 184ಕ್ಕೆ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 15 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 184 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಮಡಿಕೇರಿ ಪಟ್ಟಣದ ಗದ್ದುಗೆ ಬಳಿಯ ಜ್ವರ ಲಕ್ಷಣಗಳಿದ್ದ 28 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ, ಬೈಚನಹಳ್ಳಿಯ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು, ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 56 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಶನಿವಾರಸಂತೆ ಹೋಬಳಿ, ಗೋಪಾಲಪುರ ನಿವಾಸಿ ಬೆಂಗಳೂರು ಪ್ರಯಾಣದ ಇತಿಹಾಸವಿರುವ 24 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 22 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ತೊರೆನೂರು ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 85 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪದ ಅರವತ್ತೊಕ್ಲುವಿನ ಮೈಸೂರಮ್ಮ ಕಾಲೋನಿಯ 18 ವರ್ಷದ ಹುಡುಗನೊಬ್ಬನಿಗೆ ಸೋಂಕು ದೃಢಪಟ್ಟಿದೆ.

ಸೋಮವಾರಪೇಟೆ ತಾಲ್ಲೂಕು ಕಂಡಕೆರೆ, ಚೆಟ್ಟಳ್ಳಿ ಗ್ರಾಮದ ಆರೋಗ್ಯ ಕಾರ್ಯಕರ್ತರೊಬ್ಬರ 18 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ ಬಲಮುರಿ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಹೊಸದಾಗಿ 12 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ.

ನೀರುಗುಂದ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕಾರೆಕೊಪ್ಪ, ಸೋಮವಾರಪೇಟೆ ತಾಲ್ಲೂಕು, ಕಕ್ಕೆಹೊಳೆ, ಸೋಮವಾರಪೇಟೆ ತಾಲ್ಲೂಕು, ಗೋಪಾಲಪುರ, ಶನಿವಾರಸಂತೆ ಹೋಬಳಿ, ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕು, ಎಮ್ಮೆಗುಂಡಿ ರಸ್ತೆ, ಸುಂಟಿಕೊಪ್ಪ, ಸೋಮವಾರಪೇಟೆ ತಾಲ್ಲೂಕು, ಗದ್ದುಗೆ, ಮಡಿಕೇರಿ ನಗರ,  ಬೈಚನಹಳ್ಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು, ಕೋಣ ಮಾರಿಯಮ್ಮ ದೇವಸ್ಥಾನ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು, ಮೈಸೂರಮ್ಮ ಕಾಲೋನಿ, ಅರವತ್ತೊಕ್ಲು, ಗೋಣಿಕೊಪ್ಪ, ಕಂಡಕೆರೆ, ಚೆಟ್ಟಳ್ಳಿ ಗ್ರಾಮ, ಸೋಮವಾರಪೇಟೆ, ಬಲಮುರಿ ದೇವಸ್ಥಾನ ಬಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು, ಬೆಟ್ಟದಕಾಡು, ನೆಲ್ಲಿಹುದಿಕೇರಿ, ಸೋಮವಾರಪೇಟೆ ತಾಲ್ಲೂಕು, ಹೊಲಮಾಳ, ಚೆನ್ನಯ್ಯನಕೋಟೆ, ವಿರಾಜಪೇಟೆ ತಾಲ್ಲೂಕು, ಪಾಲಿಬೆಟ್ಟ, ವಿರಾಜಪೇಟೆ ತಾಲ್ಲೂಕು  ಈ ಮೂರು ನಿಯಂತ್ರಿತ ಪ್ರದೇಶಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

See also  ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯವೆಸಗಿಲ್ಲ: ಸಿಎಂ

ಜಿಲ್ಲೆಯ ಒಟ್ಟು ಒಟ್ಟು ಸೋಂಕಿತ ಪ್ರಕರಣಗಳು 184, ಒಟ್ಟು ಬಿಡುಗಡೆಗೊಂಡ ಪ್ರಕರಣಗಳು 68, ಒಟ್ಟು ಸಕ್ರಿಯ ಪ್ರಕರಣಗಳು 113, ಒಟ್ಟು ಮೃತಪಟ್ಟ ಪ್ರಕರಣಗಳು 3, ಒಟ್ಟು ನಿಯಂತ್ರಿತ ಪ್ರದೇಶಗಳು    77 ಆಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಲಾಕ್ ಡೌನ್ ಗೆ ಜನರ ಒಲವು

ಹಸಿರ ವಲಯದಲ್ಲಿದ್ದ ಪುಟ್ಟ ಜಿಲ್ಲೆ ಕೊಡಗು ಇಂದು 184 ಸೋಂಕಿತರ ಸಂಖ್ಯೆಯನ್ನು ಕಂಡಿದ್ದು, ಜನರಲ್ಲಿ ಸಹಜವಾಗಿಯೇ ಆತಂಕ ಮನೆ  ಮಾಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಅನಾಹುತವೇ ಸಂಭವಿಸಬಹುದು ಎಂದು ಅಭಿಪ್ರಾಯಪಡುತ್ತಿರುವ ವಿವಿಧ ಸಂಘ, ಸಂಸ್ಥೆಗಳು ಕನಿಷ್ಠ ಎರಡು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಬೇಕೆನ್ನುವ ಒತ್ತಡವನ್ನು ಹೇರಿವೆ. ಜನವಲಯದಲ್ಲೂ ಇದೇ ಅಭಿಪ್ರಾಯವಿದ್ದು, ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವವರಿಂದ ಸೋಂಕು ವ್ಯಾಪಿಸುವ ಸಾಧ್ಯತೆಗಳಿರುವುದರಿಂದ ಲಾಕ್ ಡೌನ್ ಅನಿವಾರ್ಯ ಎನ್ನುವ ಮಾತುಗಳು ಕೇಳಿ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು