News Kannada
Friday, December 02 2022

ಕರ್ನಾಟಕ

ಎಲ್ಲಾ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸುತ್ತಿಲ್ಲ : ಕೊಡಗು ಜಿಲ್ಲಾಧಿಕಾರಿ ಸ್ಪಷ್ಟನೆ

Photo Credit :

ಎಲ್ಲಾ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸುತ್ತಿಲ್ಲ : ಕೊಡಗು ಜಿಲ್ಲಾಧಿಕಾರಿ ಸ್ಪಷ್ಟನೆ

ಮಡಿಕೇರಿ: ಕೋವಿಡ್ ಸಂಬಂಧ ಎಲ್ಲಾ ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡುತ್ತಿಲ್ಲವೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುವಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ರೋಗ ಲಕ್ಷಣಗಳಿರದ ಮತ್ತು ಅತೀ ಕಡಿಮೆ ರೋಗ ಲಕ್ಷಣಗಳಿರುವ ಉತ್ತಮ ಆರೋಗ್ಯ ಸ್ಥಿತಿ ಇರುವ ಸೋಂಕಿತರನ್ನು ಅವರವರ ಮನೆಗಳಲ್ಲಿ ಅಥವಾ ಕೋವಿಡ್ ಕೇರ್ ಸೆಂಟರ್‍ಗಳಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ದಾಖಲಿಸಿರುವ ಸೋಂಕಿತರನ್ನು ದಿನಂಪ್ರತಿ ವೈದ್ಯರು ಮತ್ತು ದಾದಿಯರು ಪರೀಕ್ಷಿಸಿ ಚಿಕಿತ್ಸೆ ನೀಡತ್ತಿದ್ದಾರೆ. ಹೋಂ ಐಸೋಲೇಷನ್‍ನಲ್ಲಿರಲು ಇಚ್ಛಿಸುವ ಕೋವಿಡ್ ಸೋಂಕಿತರನ್ನು ವೈದ್ಯರು ಒಂದು ಬಾರಿ ಎಲ್ಲಾ ರೀತಿಯಲ್ಲಿ ಪರೀಕ್ಷಿಸಿದ ನಂತರ ಹೋಂ ಐಸೋಲೇಷÀನ್‍ನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರಿಗೆ ಸೂಕ್ತ ತಿಳುವಳಿಕೆ ನೀಡಿ, ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

 

See also  ಕೊಡಗಿನ ನೆರೆ ಪರಿಹಾರಕ್ಕೆ ಐಸಿಐಸಿಐ ಬ್ಯಾಂಕ್‍ನಿಂದ ರೂ.20 ಲಕ್ಷ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು