News Kannada
Friday, December 02 2022

ಕರ್ನಾಟಕ

ರಾಜ್ಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

Photo Credit :

ರಾಜ್ಯದಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಲು ಮನವಿ

ಮಡಿಕೇರಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರತಿವರ್ಷ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ವರ್ಷವೂ ಸಹ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸಲು ಉದ್ದೇಶಿಸಿದೆ.

ಕೋವಿಡ್ ಸೋಂಕು ಹಬ್ಬುತ್ತಿರುವ ಈ ದಿನಗಳಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಬಳಕೆಯಿಂದ ಗಣೇಶ ಪ್ರತಿಮೆಯನ್ನು ಮನೆಯಲ್ಲಿಯೇ ಮಾಡಿಕೊಂಡು ಪೂಜಿಸುವುದರಿಂದ ಸಾರ್ವಜನಿಕರು ಪರಿಸರಕ್ಕೆ ಅಪಾರ ಕೊಡುಗೆ ನೀಡಬಹುದಾಗಿದೆ. ಈ ಬಾರಿ ಸಗಣಿಯಿಂದ ಮಾಡಿದ ಅಥವಾ ಗೋಧಿ ಅಥವಾ ರಾಗಿ ಹಿಟ್ಟಿಗೆ ಅರಿಶಿನ ಸೇರಿಸಿ ಸಣ್ಣ ಸಣ್ಣ ಗಣೇಶನ ಪ್ರತಿಮೆ ತಯಾರಿಸಿ ಪೂಜಿಸುವ ಮೂಲಕ ಕೋವಿಡ್-19 ಎದುರಿಸಲು ಸಂಕಲ್ಪ ಮಾಡಬೇಕಾಗಿದೆ. ಇಂತಹ ಪುಟ್ಟ ಪುಟ್ಟ ಪ್ರತಿಮೆಗಳನ್ನು ತಯಾರಿಸಿ ಮನೆಯ ಆವರಣದಲ್ಲೇ ವಿಸರ್ಜನೆ ಮಾಡುವುದರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬಹುದು ಎಂದು ಪರಿಸರ ಅಧಿಕಾರಿ ಗಣೇಶನ್ ಅವರು ತಿಳಿಸಿದ್ದಾರೆ.

See also  ರಾಮನಗರದಲ್ಲಿ ಜನ ಪಟಾಕಿ ಕಂಡರೂ ಬೆಚ್ಚಿ ಬೀಳೋದ್ಯಾಕೆ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು