News Kannada
Wednesday, December 07 2022

ಕರ್ನಾಟಕ

ಕರಾವಳಿ ವಿ. ಆ. ವಲಯದ ಯೋಜನೆ ಮೂಲಕ ಉ.ಕನ್ನಡ ಜಿಲ್ಲೆ ಅಭಿವೃದ್ದಿಯಾಗಲಿದೆ: ಅನಂತಕುಮಾರ್ ಹೆಗಡೆ

Photo Credit :

ಕರಾವಳಿ ವಿ. ಆ. ವಲಯದ ಯೋಜನೆ ಮೂಲಕ ಉ.ಕನ್ನಡ ಜಿಲ್ಲೆ ಅಭಿವೃದ್ದಿಯಾಗಲಿದೆ: ಅನಂತಕುಮಾರ್ ಹೆಗಡೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶವು ವಿಶೇಷ ಆರ್ಥಿಕ ವಲಯದ ಯೋಜನೆ ಮೂಲಕ ಅಭಿವೃದ್ದಿಯಾಗಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ದೇವಳಮಕ್ಕಿಯಿಂದ ಸೋರೆಗದ್ದೆ ಸಿದ್ಧರಾಮೇಶ್ವರ ದೇವಾಲಯದಿಂದ ಕೊಂಕಣ ಗದ್ದೆ ಶಿರ್ವೆವರೆಗಿನ  ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ -3ರ  ರಸ್ತೆ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಉತ್ತರಕನ್ನಡ ಜಿಲ್ಲೆಗೆ ಕೈಗಾರಿಕೆಗಳು ಬರಬೇಕು. ಇದರಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಯೋಜನೆಗೆ ಆರ್ಥಿಕ ಚಟುವಟಿಕೆಗಳ ಪೂರಕವಾಗಿ ನಡೆಯಬೇಕು. ಇದಕ್ಕಾಗಿ ಪ್ರಯತ್ನವೂ ನಡೆದಿದೆ. ಮುಂದಿನ ದಿನದಲ್ಲಿ ಕಲ್ಪನೆಗೂ ನಿಲುಕದಷ್ಟು ಬೃಹತ್‌ ಪ್ರಮಾಣದಲ್ಲಿ ಕೈಗಾರಿಕೆಗಳು ಆರಂಭವಾಗಿ ಜಿಲ್ಲೆ ಆರ್ಥಿಕ ಪ್ರಗತಿ ಸಾಧಿಸುತ್ತದೆ. ಬೇಲೇಕೇರಿ ಬಂದರು ನಿರ್ಮಾಣವಾದರೆ ಹತ್ತು ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ  ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ‌ವಿವಿಧ ಅನುದಾನದಲ್ಲಿ  ಅನೇಕ ಕಾಮಗಾರಿಗಳನ್ನು ಪೂರ್ಣಗೊಂಡಿವೆ. ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ  ಸಂಸದರ ಅನುದಾನ ಸಹಕಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಂಸದರು ಹಲವಾರು ಯೋಜನೆಗಳನ್ನು ತಂದಿದ್ದಾರೆ.  ಕಾರವಾರ ಮತ್ತು ಅಂಕೋಲಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನುಷ್ಠಾನಕ್ಕೆ ತಂದು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಅವುಗಳ ಬಗ್ಗೆ ಯಾವುದೇ ಪ್ರಚಾರವನ್ನು ಮಾಡಿಲ್ಲ ಎಂದು ಹೇಳಿದರು.  ಕ್ಷೇತ್ರದ ಜನರಿಗೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಕೆಲವು ಯುವಕರು ಅಲ್ಪ ಸಂಬಳಕ್ಕಾಗಿ ಬೇರೆ ಬೇರೆ ಊರುಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಕಾರವಾರ-ಅಂಕೋಲಾ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಯುವಕರಿಗೆ ಕೆಲಸ ಒದಗಿಸಬೇಕು ಎಂದು ಸಂಸದರಲ್ಲಿ ಮನವಿ ಮಾಡಿದರು.

ಮೀನುಗಾರರ ಮುಖಂಡರಾದ ಗಣಪತಿ ಉಳ್ವೇಕರ,  ರಾಜೇಶ್‌ ನಾಯಕ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಇದ್ದರು.

See also  ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು