News Kannada
Sunday, November 27 2022

ಕರ್ನಾಟಕ

ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್ ನಿಂಧ ಶೇ.66 ರಷ್ಟು ಗುಣಮುಖ: 170 ಹೊಸ ಪ್ರಕರಣಗಳು ದೃಡ - 1 min read

Photo Credit :

ಬಾಗಲಕೋಟೆ ಜಿಲ್ಲೆಯಲ್ಲಿ ಕೋವಿಡ್ ನಿಂಧ ಶೇ.66 ರಷ್ಟು ಗುಣಮುಖ: 170 ಹೊಸ ಪ್ರಕರಣಗಳು ದೃಡ

ಬಾಗಲಕೋಟೆ:ಜಿಲ್ಲೆಯಲ್ಲಿ 212 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 170 ಕೊರೊನಾ ಪ್ರಕರಣಗಳು ಬುಧವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3512 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 2345 ಜನ ಕೋವಿಡ್‍ನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ ಶೇ.66 ರಷ್ಟು ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 23, ಬಾದಾಮಿ 33, ಹುನಗುಂದ 31, ಬೀಳಗಿ 28, ಮುಧೋಳ 9, ಜಮಖಂಡಿ 43, ಬೇರೆಯ ಜಿಲ್ಲೆಯ 3 ಜನ ಇದ್ದು, ಅವರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ 1179 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 636 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 38927 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 33949 ನೆಗಟಿವ್ ಪ್ರಕರಣ, 3512 ಪಾಜಿಟಿವ್ ಪ್ರಕರಣ ಹಾಗೂ 55 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1114 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 159 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್ ನಲ್ಲಿದ್ದ 8267 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

See also  ಗೂಂಡಾ, ಮಾಫಿಯಾ ತಡೆಯಲು ಮಂಜೇಶ್ವರದಲ್ಲಿ ವಿಶೇಷ ಪೊಲೀಸ್ ತಂಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು