News Kannada
Monday, December 05 2022

ಕರ್ನಾಟಕ

ಚಂದ್ರಂಪಳ್ಳಿ ಆಣೆಕಟ್ಟಿನಿಂದ ನದಿಗೆ ನೀರು ಬಿಡುಗಡೆ: ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ

Photo Credit :

ಚಂದ್ರಂಪಳ್ಳಿ ಆಣೆಕಟ್ಟಿನಿಂದ ನದಿಗೆ ನೀರು ಬಿಡುಗಡೆ: ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಕಲಬುರಗಿ: ಚಂದ್ರಂಪಳ್ಳಿ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಬರುತ್ತಿದೆ.

ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಹೆಬ್ಬಾಳ ಬೆಣ್ಣೆತೊರಾ ಯೋಜನಾ ವಿಭಾಗ-4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

 

ಚಂದ್ರಂಪಳ್ಳಿ ನದಿಯ ಸುತ್ತಮುತ್ತಲಿನ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

 

 

See also  ಉ.ಕನ್ನಡ ಜಿಲ್ಲೆಯಲ್ಲಿ ತ್ರಿಶಕತ ಬಾರಿಸಿದ ಕೊರೊನಾ:ಶನಿವಾರ 35 ಪ್ರಕರಣ ದಾಖಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು