News Kannada
Tuesday, October 04 2022

ಕರ್ನಾಟಕ

ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕ ಕಾನೂನು – ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ - 1 min read

Photo Credit :

ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕ ಕಾನೂನು – ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್

ಧಾರವಾಡ: ರಾಜ್ಯದಲ್ಲಿ ಸಂಘಟಿತ ಹಾಗೂ ವಲಸೆ ಕಾರ್ಮಿಕರ ಸಂಖ್ಯೆಗನುಗುಣವಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ಷೌರಿಕ, ಮಡಿವಾಳ, ಟೇಲರ್ ವೃತ್ತಿ ಮಾಡುವ ಅಸಂಘಟಿತ ಕಾರ್ಮಿಕರ ಸಮೀಕ್ಷೆ ಮಾಡಿ ದತ್ತಾಂಶ ಸಂಗ್ರಹಿಸಲು ಕಾರ್ಮಿಕ ಇಲಾಖೆ ನಿರ್ಧರಿಸಿದ್ದು, ಬರುವ ಅಧಿವೇಶನದಲ್ಲಿ ರಾಜ್ಯದ ಎಲ್ಲ ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕವಾದ ಕಾನೂನನ್ನು ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರೆಬೈಲ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಇಲಾಖೆ ಫಲಾನುಭವಿಗಳಿಗೆ ಪರಿಹಾರ ಚೆಕ್‍ಗಳ ವಿತರಣಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕಾರ್ಮಿಕ ಇಲಾಖೆಯು ಕಾರ್ಮಿಕ ಮತ್ತು ಮಾಲೀಕರ ಮಧ್ಯೆ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಕೋವಿಡ್-19 ಬಂದಿರುವುದರಿಂದ ಕಾರ್ಮಿಕ ವರ್ಗ ಹಾಗೂ ಉದ್ಯಮ ವರ್ಗಕ್ಕೆ ಅನೇಕ ಪಾಠಗಳನ್ನು ಕಲಿಸಿದೆ. ಕಾರ್ಮಿಕ ವರ್ಗದ ಶ್ರಮದಿಂದಾಗಿ ದೇಶದ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಕಾರ್ಮಿಕರ ಹಿತ ರಕ್ಷಣೆಗಾಗಿ ವಿವಿಧ ಕಾನೂನುಗಳು ಅಸ್ತೀತ್ವದಲ್ಲಿದ್ದರೂ ಉದ್ಯೋಗ ಕಡಿತ ಹಾಗೂ ಉತ್ಪಾದನೆಗಳ ಸ್ಥಗಿತದ ಹಿನ್ನೆಲೆಯಲ್ಲಿ ಇಲಾಖೆಯು ಮಾನವೀಯತೆ ಆಧರದಿಂದ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ.

See also  ಏ. 7ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು