News Kannada
Wednesday, October 05 2022

ಕರ್ನಾಟಕ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ - 1 min read

Photo Credit :

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ರಾಷ್ಟ್ರಪತಿ ದಿ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಪ್ರಣಬ್ ಮುಖರ್ಜಿ ಅವರು ಸ್ವಾತಂತ್ರ್ಯ ಹೋರಾಟವನ್ನು ಬಾಲ್ಯದಲ್ಲಿ ಕಂಡವರು. ಸಣ್ಣ ವಯಸ್ಸಿನಲ್ಲೇ ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದವರು ಎಂದು ಬಣ್ಣಿಸಿದರು.

ತಾವು ಸಚಿವರಾಗಿದ್ದ ಅವಧಿಯಲ್ಲಿ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಖರ್ಜಿ ಅವರು ಶಿಕ್ಷಕರಾಗಿ, ವಕೀಲರಾಗಿ, ಅಂಚೆ ಇಲಾಖೆ ನೌಕರರಾಗಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು, ದೇಶದ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದಾರೆ ಎಂದರು.

ಪ್ರಣಬ್ ಅವರ ನಾಯಕತ್ವದ ಗುಣಗಳನ್ನು ಕಾಂಗ್ರೆಸ್‍ನ ಪ್ರತಿಯೊಬ್ಬ ಕಾರ್ಯಕರ್ತ ಮೈಗೂಡಿಸಿಕೊಳ್ಳಬೇಕೆಂದು ಮಂಜುನಾಥ್ ಕುಮಾರ್ ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಮಾತನಾಡಿ, ಪ್ರಣಬ್ ಮುಖರ್ಜಿ ಅವರು ಕಾಂಗ್ರೆಸ್ ಪಕ್ಷದ ಧೀಮಂತ ನಾಯಕರಾಗಿದ್ದರು. ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ದೇಶದ ಬಲವನ್ನು ಹೆಚ್ಚಿಸಿದ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಈ ದೇಶಕ್ಕೆ ಅವರು ನೀಡಿದ ಕೊಡುಗೆ ದೊಡ್ಡದು ಎಂದರು.

See also  ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮಾಜಿ ಸೈನಿಕ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು