News Kannada
Tuesday, October 04 2022

ಕರ್ನಾಟಕ

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಕೊಡಗು ಡಿಸಿ ಅನೀಸ್ ಕಣ್ಮಣಿ - 1 min read

Photo Credit :

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಕೊಡಗು ಡಿಸಿ ಅನೀಸ್ ಕಣ್ಮಣಿ

ಮಡಿಕೇರಿ: ಉತ್ತಮ ಸಮಾಜ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು. ಈ ನಿಟ್ಟಿನಲ್ಲಿ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮತ್ತಷ್ಟು ಉತ್ತಮಗೊಳಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಮೈಕಲರ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಕೊಡಗು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ದೀಪ ಬೆಳಗಿಸಿ ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ 4-5 ವರ್ಷಗಳಿಂದಲೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ. ಶಿಕ್ಷಕರೊಂದಿಗೆ ಸಮಯ ಕಳೆಯುವುದು ಸಂತಸದ ವಿಷಯ. ಒಬ್ಬ ಜಿಲ್ಲಾಧಿಕಾರಿಯಾಗಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಬಹು ಮುಖ್ಯವಾದವು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ. ಅಂತಹ ಶಿಕ್ಷಕರಿಗೆ ಅಭಿನಂದನೆಗಳು. ಶಿಕ್ಷಣವನ್ನು ಮತ್ತಷ್ಟು ಉತ್ತಮ ಮತ್ತು ಪರಿಣಾಮಕಾರಿಯಾಗಿಸುವಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದರು.

ಶಾಲಾ ಹಂತದಲ್ಲಿ ಶಿಕ್ಷಕರು ಹೇಳಿಕೊಡುವ ಪಾಠ ಮತ್ತು ವಿಚಾರಗಳು ಮಕ್ಕಳಲ್ಲಿ ಆಳವಾಗಿ ಬೇರೂರುತ್ತದೆ. ಈ ನಿಟ್ಟಿನಲ್ಲಿ ಮತ್ತಷ್ಟು ಉತ್ತಮ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಜಿಲ್ಲೆಯಲ್ಲಿ ಬಹುದೂರದವರೆಗೆ ಶಿಕ್ಷಕರು ಕಾಲ್ನಡಿಗೆಯಲ್ಲಿ ತೆರಳಿ ಪಾಠ ಮಾಡುತ್ತಾರೆ. ಕೆಲವು ಕಡೆ ವಿದ್ಯುತ್ ಸಮಸ್ಯೆಯಿದ್ದರೂ ಅವೆಲ್ಲವನ್ನೂ ಮೀರಿ ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.

See also  ರಿಕ್ಷಾಗೆ ಕಾರು ಡಿಕ್ಕಿ: ಆಟೋ ಚಾಲಕ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು