News Kannada
Wednesday, October 05 2022

ಕರ್ನಾಟಕ

ಪೊಲೀಸ್ ದರ್ಪ ಆರೋಪ: ಪ್ರಗತಿಪರ ಜನಾಂದೋಲನ ವೇದಿಕೆಯಿಂದ ಪ್ರತಿಭಟನೆ - 1 min read

Photo Credit :

ಪೊಲೀಸ್ ದರ್ಪ ಆರೋಪ: ಪ್ರಗತಿಪರ ಜನಾಂದೋಲನ ವೇದಿಕೆಯಿಂದ ಪ್ರತಿಭಟನೆ

ಮಡಿಕೇರಿ: ಸಾಮಾಜಿಕ ಹೋರಾಟಗಾರ ಹಾಗೂ ಚಿಂತಕರೂ ಆದ ಕೆ.ಎಲ್.ಅಶೋಕ್ ಅವರನ್ನು ಕೆಲವು ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಪ್ರಗತಿಪರ ಜನಾಂದೋಲನ ವೇದಿಕೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವೇದಿಕೆಯ ಪ್ರಧಾನ ಸಂಚಾಲಕ ವಿ.ಪಿ.ಶಶಿಧರ್, ಸಮಾಜಮುಖಿ ಚಿಂತಕರು ಹಾಗೂ ಸಂವಿಧಾನಬದ್ಧವಾಗಿ ಹೋರಾಟಗಳನ್ನು ನಡೆಸುವವರನ್ನು ಉದ್ದೇಶಪೂರ್ವಕವಾಗಿ ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು. ಕೆ.ಎಲ್.ಅಶೋಕ್ ಅವರು ಕುಟುಂಬದೊಂದಿಗೆ ತೆರಳುತ್ತಿದ್ದ ಸಂದರ್ಭ ಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ತಮಗರಿವಿಲ್ಲದೆ ನಿರ್ಬಂಧಿತ ಪ್ರದೇಶದಲ್ಲಿ ವಾಹನವನ್ನು ನಿಲುಗಡೆಗೊಳಿಸಿದ್ದಾರೆ. ಇದನ್ನು ಗಮನಿಸಿದ ಪೊಲೀಸ್ ಅಧಿಕಾರಿಯೊಬ್ಬರು ಕುಟುಂಬದ ಸದಸ್ಯರ ಸಮ್ಮುಖದಲ್ಲೇ ಅತ್ಯಂತ ಅಸಭ್ಯ ಪದಗಳಿಂದ ನಿಂದಿಸಿದ್ದು, ಇದನ್ನು ಖಂಡಿಸುವುದಾಗಿ ಹೇಳಿದರು.

ಅಧಿಕಾರಿ ದರ್ಪದಿಂದ ವರ್ತಿಸುವ ಮೂಲಕ ಓರ್ವ ಜನಪರ ಹೋರಾಟಗಾರನನ್ನು ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿದರು.

ಆಡಳಿತ ವರ್ಗದವರ ಕೈಗೊಂಬೆಗಳಾಗಿ ಬದುಕುವ ಅಧಿಕಾರಿಗಳ ವಿರುದ್ಧ ಕೊಡಗು ಪ್ರಗತಿಪರ ಜನಾಂದೋಲನ ವೇದಿಕೆ ನಿರಂತರ ಹೋರಾಟವನ್ನು ನಡೆಸಲಿದೆ ಎಂದರು.

See also  ಡೆತ್ ನೋಟ್ ಬರೆದಿಟ್ಟು ಪ್ರೇಮಿಮಗಳಿಬ್ಬರು ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು