News Kannada
Tuesday, September 27 2022

ಕರ್ನಾಟಕ

ಜಮೀನಿಗಾಗಿ ಮಾಜಿ ಸೈನಿಕರಿಂದ ಅರ್ಜಿ: ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ  - 1 min read

Photo Credit :

ಜಮೀನಿಗಾಗಿ ಮಾಜಿ ಸೈನಿಕರಿಂದ ಅರ್ಜಿ: ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ 

ಮಡಿಕೇರಿ: ಜಿಲ್ಲೆಯಲ್ಲಿ ಮಾಜಿ ಸೈನಿಕರಿಂದ ಭೂಮಿ ನೀಡಬೇಕೆಂದು ಸಲ್ಲಿಕೆಯಾಗಿರುವ ಸುಮಾರು 379 ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಹೋಬಳಿವಾರು ಅಗತ್ಯ ಕ್ರಮವಹಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ಸೈನಿಕರ ಮಂಡಳಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾಜಿ ಸೈನಿಕರು ಭೂಮಿಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ಸಂಬಂಧ ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಜೊತೆ ಖುದ್ದು ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಜರಾಗಿ ವಿಲೇವಾರಿ ಮಾಡಬೇಕು. ಜೊತೆಗೆ ಈ ಸಂಬಂಧ ಪಟ್ಟಿ ಸಿದ್ಧಪಡಿಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಯಾವ ಯಾವ ದಿನಾಂಕದಂದು ಹೋಬಳಿಗೆ ತೆರಳಲಾಗುತ್ತದೆ ಎಂಬ ಬಗ್ಗೆ ಮುಂಚಿತವಾಗಿ ಆಯಾಯ ಹೋಬಳಿ ವ್ಯಾಪ್ತಿಯ ಮಾಜಿ ಸೈನಿಕರಿಗೆ ಮಾಹಿತಿ ನೀಡಬೇಕು. ಭೂಮಿಗೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಸಂಬಂಧ ಅಕ್ಟೋಬರ್ 15 ರೊಳಗೆ ಪೂರ್ಣಗೊಳಿಸುವಂತೆ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು.

ಮಾಜಿ ಸೈನಿಕರ ಕುಂದು ಕೊರತೆ ಸಂಬಂಧಿಸಿದಂತೆ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಭೂಮಿ ಇತರ ವಿಚಾರಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸ್ಪಂದಿಸುವ ಕೆಲಸವಾಗಬೇಕು. ಕಂದಾಯಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ ಅವರು ಮಾಜಿ ಸೈನಿಕರು ಕೃಷಿ ಸಾಲ ಪಡೆಯುವಂತಾಗಲು ವ್ಯವಸ್ಥೆ ಮಾಡಬೇಕಿದೆ ಎಂದು ಅವರು ಕೋರಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಜತೆ ಚರ್ಚಿಸುವಂತೆ ಸಲಹೆ ಮಾಡಿದರು.

ಮಾಜಿ ಸೈನಿಕರು ಆಶ್ರಯ ಯೋಜನೆಯಡಿ ಶೇ.1 ರಷ್ಟು ಮೀಸಲಾತಿಗೆ ಅನುಗುಣವಾಗಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಮಾಜಿ ಸೈನಿಕರ ಕೋಟಾದ ಆಯ್ಕೆಯಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಂತರ್ಜಾಲದಲ್ಲಿ ವ್ಯವಸ್ಥೆ ಮಾಡಬೇಕಿದೆ ಎಂದು ಗೀತಾ ಅವರು ಮನವಿ ಮಾಡಿದರು.

See also  ಯಡಿಯೂರಪ್ಪ ಕಣ್ಣೀರಿಗೆ ಯಾರು ಕಾರಣ ಬಹಿರಂಗಪಡಿಸಿ : ಡಿ ಕೆ ಶಿವಕುಮಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು