News Kannada
Thursday, September 29 2022

ಕರ್ನಾಟಕ

ಸಿಬಿಐ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - 1 min read

Photo Credit :

ಸಿಬಿಐ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಸರ್ಕಾರ ಚುನಾವಣೆ ಸಮೀಪಿಸುವಾಗಲೆಲ್ಲ ಹತಾಶ ಮನೋಭಾವದಿಂದ ಇಡಿ ಮತ್ತು ಸಿಬಿಐ ದಾಳಿಯ ಬಲ ಪ್ರಯೋಗ ಮಾಡುತ್ತಿದೆ ಎಂದು ಟೀಕಿಸಿದರು. ಅಭಿವೃದ್ಧಿ ಸಾಧಿಸಲಾಗದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ ಕಾನೂನಿನ ಅರಿವಿಲ್ಲದ ಬಿಜೆಪಿ ನಾಯಕರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿರುವುದು ಖಂಡನೀಯವೆಂದರು.

ಕಾಂಗ್ರೆಸ್ ಬೆಳವಣಿಗೆಯನ್ನು ಸಹಿಸಲಾಗದ ಬಿಜೆಪಿ ಸರ್ಕಾರ ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ಮತ್ತು ಇಡಿ ಮೂಲಕ ದಾಳಿ ಮಾಡಿಸಿದೆ. ಸರ್ಕಾರ ದ್ವೇಷದ ರಾಜಕರಣ ಮಾಡುತ್ತಿದ್ದರೆ, ಸಿಬಿಐ ಅಧಿಕಾರಿಗಳು ಕೇಂದ್ರ ಸರ್ಕಾರದ ಅಣತಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ ಮಾಧ್ಯಮ ಸಂಸ್ಥೆಯನ್ನೇ ಮುಚ್ಚಿಸಿರುವುದು ಸರ್ವಾಧಿಕಾರ ಧೋರಣೆಗೆ ಸಾಕ್ಷಿಯಾಗಿದೆ. ಕೋವಿಡ್ ಅವ್ಯವಹಾರವನ್ನು ಮುಚ್ಚಿ ಹಾಕುವ ಯತ್ನವಾಗಿ ದಾಳಿ ನಡೆಸಲಾಗಿದೆ ಎಂದು ಟೀಕಿಸಿದ ಮಂಜುನಾಥ್ ಕುಮಾರ್, ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿರುವ ಬಿಜೆಪಿ ಸರ್ಕಾರ ತನ್ನ ವಿರುದ್ಧ ಇರುವ ಭ್ರಷ್ಟಾಚಾರದ ಆರೋಪಗಳನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವೆಂಕಪ್ಪಗೌಡ ಮಾತನಾಡಿ, ಬಿಜೆಪಿ ನೇತೃತ್ವದ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು, ಸಿಬಿಐ ದಾಳಿಯ ನೆಪದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷ ಈ ರೀತಿಯ ಕ್ಷುಲ್ಲಕ ರಾಜಕಾರಣವನ್ನು ಸಮರ್ಥವಾಗಿ ಎದುರಿಸಲಿದೆ ಎಂದರು.

See also  ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು