News Kannada
Sunday, September 25 2022

ಕರ್ನಾಟಕ

ಭಕ್ತಾಧಿಗಳು ತ್ರಿವೇಣಿ ಸಂಗಮಕ್ಕೆ ಇಳಿಯದಂತೆ ಮನವಿ - 1 min read

Photo Credit :

ಭಕ್ತಾಧಿಗಳು ತ್ರಿವೇಣಿ ಸಂಗಮಕ್ಕೆ ಇಳಿಯದಂತೆ ಮನವಿ

ಮಡಿಕೇರಿ: ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ  ತ್ರಿವೇಣಿ ಸಂಗಮ ಭರ್ತಿಯಾಗುತ್ತಿದ್ದು, ಭಕ್ತಾಧಿಗಳು ಸಂಗಮಕ್ಕೆ ಇಳಿಯಬಾರದು ಎಂದು ತಲಕಾವೇರಿ-ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ ಅವರು ಮನವಿ ಮಾಡಿದ್ದಾರೆ.

ಭಾಗಮಂಡಲದಲ್ಲಿ ಗುರುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು   ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಳವಾಗುತ್ತಿರುವುದರಿಂದ ನದಿಗೆ ಇಳಿಯಬಾರದು. ಭಕ್ತಾಧಿಗಳು ತುಂಬಾ ಎಚ್ಚರ ವಹಿಸಬೇಕಿದೆ. ಅ.17 ರಂದು ಪಿಂಡ ಪ್ರದಾನ ಕಾರ್ಯಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅವಕಾಶವಿದೆ. ತುಲಾ ಸಂಕ್ರಮಣ ಜಾತ್ರಾ ವಿಶೇಷ ಪೂಜಾ ಕಾರ್ಯವು ಅ.17 ರಿಂದ ನ.17 ರವರೆಗೆ ಒಂದು ತಿಂಗಳ ಕಾಲ ಜರುಗಲಿದ್ದು, ಭಕ್ತಾಧಿಗಳು ಈ ಸಮಯದಲ್ಲಿ ಆಗಮಿಸಿ ಪೂಜಾ ಕಾರ್ಯ ಕೈಗೊಳ್ಳಬಹುದಾಗಿದೆ ಎಂದು ಮನವಿ ಮಾಡಿದರು.

ತಲಕಾವೇರಿ ತುಲಾ ಸಂಕ್ರಮಣ ಜಾತ್ರೆ ಸಂಬಂಧ ಜಿಲ್ಲಾಡಳಿತ ಹೊರಡಿಸಿರುವ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು ಎಂದು ಕೋರಿದರು.  ಕೋವಿಡ್ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಭಕ್ತಾಧಿಗಳು ಯಾವುದೇ ಗೊಂದಲಕ್ಕೆ ಅವಕಾಶ ಮಾಡಬಾರದು. ಗುಂಪು ಸೇರುವುದು ಮತ್ತಿತರ ಕಾರ್ಯವನ್ನು ಮಾಡಬಾರದು. ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಪ್ರಮಾಣ ಪತ್ರ ತರಬೇಕು. ಭಾವನಾತ್ಮಕವಾಗಿ ಯಾವುದಕ್ಕೂ ಅವಕಾಶ ಮಾಡಬಾರದು ಎಂದು ತಮ್ಮಯ್ಯ ಅವರು ಕಳಕಳಿಯಿಂದ ಮನವಿ ಮಾಡಿದರು.

ತಲಕಾವೇರಿಗೆ ಆಗಮಿಸುವ ಭಕ್ತಾಧಿಗಳಿಗೆ ತೀರ್ಥ ನೀಡಲಾಗುವುದು. ಇದಕ್ಕಾಗಿ 30 ಮಂದಿ ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ. ಜೊತೆಗೆ ತೀರ್ಥ ಪ್ರೋಕ್ಷಣೆ ಮಾಡಲಾಗುವುದು ಎಂದರು.

ಕಾನೂನನ್ನು ಪಾಲಿಸುವುದು ಪ್ರತಿಯೊಬ್ಬರ ಸಂವಿಧಾನಾತ್ಮಕ ಕರ್ತವ್ಯವಾಗಿದ್ದು, ಅದರಂತೆ ನಡೆದುಕೊಳ್ಳಬೇಕು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಬರುವವರನ್ನು ಯಾವುದೇ ಕಾರಣಕ್ಕೂ ತಡೆಯಬಾರದು ಎಂದು ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಕೋರಿದರು.

  ಅ.17 ರಂದು ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ಸೂಕ್ತ ಬಂದೋ ಬಸ್ತನ್ನು ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು. ಡಿ.18 ರೊಳಗೆ ಸಂಗಮ ಬಳಿ ನಾಗ ಪ್ರತಿಷ್ಠಾಪನಾ ಮಾಡಲು ಚಿಂತಿಸಲಾಗಿದೆ ಎಂದು ತಮ್ಮಯ್ಯ ಹೇಳಿದರು.

ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ನೂತನವಾಗಿ ನಿರ್ಮಿಸಿರುವ ಮುಡಿ ಶೆಡ್ಡು, ಪಿಂಡ ಪ್ರದಾನ, ಶ್ರದ್ಧಾ ಮತ್ತು ಹೋಮ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಅ.16 ರಂದು ಸಂಜೆ 4 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.    

ಸುಮಾರು 78 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೊಳಗಳಲಾಗಿದ್ದು, ಅವುಗಳನ್ನು ಉದ್ಘಾಟಿಸಲಿದ್ದಾರೆ. ಹಾಗೆಯೇ ಅಧಿಕಾರಿಗಳ ಜೊತೆ ತಲಕಾವೇರಿ ತುಲಾಸಂಕ್ರಮಣ ಜಾತ್ರೆ ಸಂಬಂಧ ಚರ್ಚಿಸಲಿದ್ದಾರೆ ಎಂದು ತಮ್ಮಯ್ಯ ಅವರು ಮಾಹಿತಿ ನೀಡಿದರು.

ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಿಡ್ಯಮಲೆ ಮೀನಾಕ್ಷಿ ಸುರೇಶ್, ಕೆದಂಬಾಡಿ ಟಿ.ರಮೇಶ್, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.

See also  ನಕಲಿ ಕಂಪೆನಿ ಜೊತೆ ವ್ಯವಹಾರ:11 ಲಕ್ಷ ರೂ. ಪಂಗನಾಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು