News Kannada
Monday, October 03 2022

ಕರ್ನಾಟಕ

ಎಡನೀರು ಮಠದ ನೂತನ ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತಿ ಪುರಪ್ರವೇಶ - 1 min read

Photo Credit :

ಎಡನೀರು ಮಠದ ನೂತನ ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತಿ ಪುರಪ್ರವೇಶ

ಕಾಸರಗೋಡು: ಎಡನೀರು ಮಠದ ನೂತನ ಮಠಾಧೀಶರಾಗಿ ನಿಯುಕ್ತಿಗೊಂಡಿರುವ ಶ್ರೀಸಚ್ಚಿದಾನಂದ ಭಾರತಿಗಳು ಸೋಮವಾರ ಕಾಂಚಿ ಪೀಠದಲ್ಲಿ ದೀಕ್ಷೆ ಸ್ವೀಕರಿಸಿ ಮಂಗಳವಾರ ಎಡನೀರು ಪುರ ಪ್ರವೇಶ ನಡೆಸಿದರು.

ಸೋಮವಾರ ಕಾಂಚಿ ಜಗದ್ಗುರು ಪೀಠದಲ್ಲಿ ನಡೆದ ಸಮಾರಂಭದಲ್ಲಿ ಭಾರತಿ ವಿಜಯೇಂದ್ರ ಸರಸ್ವತಿಗಳು ವಿದ್ಯುಕ್ತವಾಗಿ ದೀಕ್ಷೆ ನೀಡಿದರು. ಬಳಿಕ ಸಂಜೆ ಬೆಂಗಳೂರಲ್ಲಿರುವ ಶಾಖಾ ಮಠಕ್ಕೆ ಚಿತ್ರೈಸಿ ತಂಗಿದರು. ಮುಂಜಾನೆ ಬೆಂಗಳೂರಿನಿಂದ ಹೊರಟು ಮಂಗಳವಾರ ಮಧ್ಯಾಹ್ನ 12ರ ವೇಳೆಗೆ ಶ್ರೀಗಳು ಎಡನೀರಿಗೆ ಆಗಮಿಸಿದರು. ಈ ವೇಳೆ ಭವ್ಯ ಸ್ವಾಗತ ನೀಡಲಾಯಿತು.

ಪುರಪ್ರವೇಶದ ಬಳಿಕ ಪಟ್ಟದ ದೇವರ ಪೂಜೆ, ಬಳಿಕ ಎಡನೀರು ವಿಷ್ಣುಮಂಗಲ ದೇವಸ್ಥಾನ ಭೇಟಿ, ನವಗ್ರಹ ಶಾಂತಿ ಹವನದ ಪೂರ್ಣಾಹುತಿಯಲ್ಲಿ ಭಾಗವಹಿಸಿ ಮರಳಿ ಮಠಕ್ಕೆ ಹಿಂತಿರುಗಿದರು.

ಈ ಸಂದರ್ಭದಲ್ಲಿ ತಂತ್ರಿವರ್ಯರು, ವೈದಿಕರು, ಸಂಸದ ರಾಜಮೋಹನ ಉಣ್ಣಿತ್ತಾನ್, ಉದುಮ ಶಾಸಕ ಕೆ.ಕುಂಞ ರಾಮನ್, ಮುರಳೀ ತಂತ್ರಿ, ರವೀಶ ತಂತ್ರಿ ಕುಂಟಾರು, ಶ್ರೀಶದೇವ ಪೂಜಿತ್ತಾಯ, ಪೀಠಾರೋಹಣ ಸಮಿತಿ ಕಾರ್ಯಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು. 

ನಾಳೆ ( 28) ಪೀಠಾರೋಹಣ:

ಶ್ರೀಸಚ್ಚಿದಾಂದ ಭಾರತಿಗಳ ಪೀಠಾರೋಹಣ ವಿಧಿ ವಿಧಾನಗಳು ನಾಳೆ  ನಡೆಯಲಿದೆ. ಬೆಳಿಗ್ಗೆ ಗಣಪತಿ ಹವನ, ಚಂಡಿಕಾ ಹೋಮ, ಪಟ್ಟದ ದೇವರಿಗೆ ಪೂಜೆ, ಅಭಿಷೇಕ ಪೂಜೆ, ಬೆಳಿಗ್ಗೆ 10 ರ ಬಳಿಕ ಪೀಠಾರೋಹಣ, ಮಧ್ಯಾಹ್ನ ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಸಮಾರಂಭದಲ್ಲಿ ನಾಡಿನ ಉದ್ದಗಲದ ವಿವಿಧ ಮಠಾಧೀಶರು, ಧಾರ್ಮಿಕ, ಸಾಂಸ್ಕೃತಿಕ , ಸಾಮಾಜಿಕ ಮುಂದಾಳುಗಳು ಪಾಲ್ಗೊಳ್ಳಲಿದ್ದು, ಸರ್ಕಾರದ ಕೋವಿಡ್ ಮಾನದಂಡ  ದಂತೆ  ಕಾರ್ಯಕ್ರಮ  ನಡೆಯಲಿದೆ.

See also  ಬರಿದಾಗಿದ್ದ ಬಂಡೀಪುರದ ಕೆರೆಗಳು ಭರ್ತಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು