News Kannada
Thursday, September 29 2022

ಕರ್ನಾಟಕ

ನೆಲಮಂಗಲದಲ್ಲಿ ಐದು ಬಾಲ ಕಾರ್ಮಿಕರ ರಕ್ಷಣೆ - 1 min read

Photo Credit :

ನೆಲಮಂಗಲದಲ್ಲಿ ಐದು ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ: ಗ್ಯಾರೇಜ್, ಬೇಕರಿ, ಹೂವಿನ ಅಂಗಡಿ, ಹಣ್ಣು ಮತ್ತು ತರಕಾರಿ ಅಂಗಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಮಕ್ಕಳ ಸಹಾಯವಾಣಿ, ಶಿಕ್ಷಣ ಇಲಾಖೆ, ಪೆÇಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅರಿವು ಹಾಗೂ ಕಾರ್ಯಾಚರಣೆಯನ್ನು ಎರಡು ದಿನಗಳ ಕಾಲ  ನಡೆಸಿದ್ದು ನೆಲಮಂಗಲ ಪಟ್ಟಣದ ಗ್ಯಾರೇಜ್, ಬೇಕರಿ, ಹೂವಿನ ಅಂಗಡಿ, ಹಣ್ಣು ಮತ್ತು ತರಕಾರಿ ಅಂಗಡಿಗಳಿಗೆ ಭೇಟಿ ನೀಡಿ, ತಪಾಸಣೆ ನಡೆಸಿ, ಕಾರ್ಯಾಚರಣೆ ವೇಳೆ ಐದು ಮಂದಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ನೆಲಮಂಗಲ ಪಟ್ಟಣದಲ್ಲಿ ನಡೆದ ಬಾಲ ಕಾರ್ಮಿಕರ ಕಾರ್ಯಾಚರಣೆ ವೇಳೆ 14 ವರ್ಷಕ್ಕಿಂತ ಕಡಿಮೆ ಇರುವ ಐದು  ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ನೆಲಮಂಗಲದ ಸಂದೀಪ್ ಸೇವಾ ನಿಲಯಂ ಸಂಸ್ಥೆಯ ಬಾಲಕಾರ್ಮಿಕರ ವಿಶೇಷ ತರಬೇತಿ ಕೇಂದ್ರದಲ್ಲಿ ತಾತ್ಕಾಲಿಕ ಪುನರ್ವಸತಿಯನ್ನು ಕಲ್ಪಿಸಲಾಯಿತು ಅಲ್ಲದೆ, ಸದರಿ ಮಕ್ಕಳ ವೈದ್ಯಕೀಯ ತಪಾಸಣೆಯನ್ನು ನಡೆಸಿದ್ದು, ಶುಕ್ರವಾರದಂದು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗುವುದು. ಈ ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕಾನೂನು ಕ್ರಮಜರುಗಿಸಲಾಗುವುದು ಎಂದು ಜಿಲ್ಲಾ ಬಾಲ ಕಾರ್ಮಿಕಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬಾರಾವ್ ತಿಳಿಸಿದ್ದಾರೆ.

ತಪಾಸಣೆ ವೇಳೆ ರಸ್ತೆಯಲ್ಲಿ ಇಬ್ಬರು ಮಕ್ಕಳು ಕರಪತ್ರಗಳನ್ನು ವಿತರಿಸುತ್ತಿರುವುದನ್ನು ಗಮನಿಸಿ, ಸದರಿ ಮಕ್ಕಳ ಪೋಷಕರನ್ನು ತಪಾಸಣಾ ಸ್ಥಳಕ್ಕೆ ಕರೆಸಿ, ಮಕ್ಕಳನ್ನು ಈ ರೀತಿ ಕರಪತ್ರಗಳನ್ನು ವಿತರಿಸುವುದಕ್ಕೆ ಕಳುಹಿಸಬಾರದೆಂದು ತಿಳುವಳಿಕೆ ನೀಡಿ, ಇಬ್ಬರು ಮಕ್ಕಳನ್ನು ಅವರವರ ಪೋಷಕರಿಗೆ ಒಪ್ಪಿಸಲಾಗಿದೆ.

 

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು, ಯಾವುದೇ ಕ್ಷೇತ್ರದಲ್ಲಿ ಹಾಗೂ 18  ವರ್ಷದೊಳಗಿನ ಮಕ್ಕಳನ್ನು  ಅಪಾಯಕಾರಿ ಕ್ಷೇತ್ರದಲ್ಲಿ  ದುಡಿಸಿದ್ದಲ್ಲಿ, ಅಂತಹವರಿಗೆ  ಕನಿಷ್ಟ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ ಗರಿಷ್ಟ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 20 ಸಾವಿರದಿಂದ ರೂ. 50 ಸಾವಿರದವರೆಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಕಾರ್ಮಿಕ ನಿರೀಕ್ಷಕರಾದ ನಾಗರತ್ನ ಅವರು ಅಂಗಡಿ ಮಾಲೀಕರಿಗೆ ತಿಳಿಸಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹೇಮಾವತಿ ಅವರು 01 ರಿಂದ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿ ಕೊಂಡಿರುವುದು ಕಂಡು ಬಂದಲ್ಲಿ, ಸಾರ್ವಜನಿಕರು ಕೂಡಲೇ 1098 ಮಕ್ಕಳ ಉಚಿತ ಸಹಾಯವಾಣಿಗೆ ಕರೆ ಮಾಡುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

See also  ಕಾಸರಗೋಡು ಪೊಲೀಸ್ ವರಿಷ್ಠಾಧಿಕಾರಿ ಹೋಮ್ ಕ್ವಾರಂಟೈನ್ ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು