News Kannada
Friday, September 30 2022

ಕರ್ನಾಟಕ

ಮುಂದಿನ ಸಭೆಯೊಳಗೆ ಚರ್ಚಿಸಿದ ವಿಷಯ ಪರಿಹಾರವಾಗಬೇಕು: ಸುಮಲತ - 1 min read

Photo Credit :

ಮುಂದಿನ ಸಭೆಯೊಳಗೆ ಚರ್ಚಿಸಿದ ವಿಷಯ ಪರಿಹಾರವಾಗಬೇಕು: ಸುಮಲತ

ಮಂಡ್ಯ: ಈ ತ್ರೈಮಾಸಿಕ ಸಭೆಯಲ್ಲಿ ಚರ್ಚಿಸಿದ ವಿಷಯಗಳೆಲ್ಲವೂ ಚರ್ಚೆಯ  ನಂತರದಲ್ಲಿ ಕಾರ್ಯನ್ಮುಖವಾಗಿ ಮುಂದಿನ ಸಭೆಯಲ್ಲಿ  ಪರಿಹಾರವಾಗಿರಬೇಕು ಹಾಗೂ ಕೋವಿಡ್‍ನ ಸಮಯದಲ್ಲಿ ಸಾರ್ವಜನಿಕರಿಗೆ ಹಲವಾರು ತೊಂದರೆಗಳಾಗಿದ್ದು, ಅವುಗಳನ್ನು ಪಟ್ಟಿ ಮಾಡಿ ಎಂದು ಅಧಿಕಾರಿಗಳಿಗೆ ಲೋಕಸಭಾ ಸಂಸದರು ಮತ್ತು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸುಮಲತ ಅಂಬರೀಷ್ ಸೂಚಿಸಿದರು.

ಮಂಗಳವಾರ ಜಿಲ್ಲಾಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಕೇಂದ್ರ ವಲಯ ಅಥವಾ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಸರ್ಕಾದ ಸ್ಟಾರ್ಟ್ ಅಪ್ ಯೋಜನೆಗೆ ಮಂಡ್ಯದ ಕೃಷಿ ಇಲಾಖೆ ಆಯ್ಕೆಯಾಗಿ ಪ್ರಶಸ್ತಿಗೆ ಭಾಜನರಾಗಿರುವುದು ಸಂತೋಷಕರ ವಿಷಯವಾಗಿದ್ದು, ಈ ಒಂದು ಪುರಸ್ಕಾರ ಜಿಲ್ಲೆಯ ರೈತರಿಗೆ ಸಲ್ಲಬೇಕಾಗಿದೆ ಎಂದರು.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ನರ್ಸ್‍ಗಳ ಕೊರತೆ ಇದ್ದು, ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳು ಸಾರ್ವಜನಿಕರಿಗೆ ಸರಿಯಾಗಿ ದೊರಕುತ್ತಿಲ್ಲ ಎಂಬ ದೂರಿನ ಹಿನ್ನಲೆಯಲ್ಲಿ ಆರೋಗ್ಯ ಸಚಿವರಾದ ಡಾ.ಸುಧಾಕರ್ ಅವರ ಗಮನಕ್ಕೆ ತರುವುದಾಗಿ ಹೇಳಿದರಲ್ಲದೆ, ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಮತ್ತು ಅವರ ಸಹಕಾರವನ್ನು ಪಡೆದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಯವರು ತಮ್ಮ ಕಾರ್ಯವನ್ನು ನಿರ್ವಹಿಸಬೇಕು ಹಾಗೂ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು,  ಕಡಲೂರು ಗ್ರಾಮ ಪಂಚಾಯಿತಿಯಲ್ಲಿ ಹಲವಾರು ತೊಂದರೆಗಳಿದ್ದು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗೆ ರವಾನೆಯಾಗುತ್ತಿರುವ ರಸಗೊಬ್ಬರಗಳ ವಿಷಯವಾಗಿ ದೂರುಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ. ಸದಾನಂದಗೌಡರ ಜೊತೆಯಲ್ಲಿ ಮಾತನಾಡಿರುವುದಾಗಿ ಹೇಳಿದರು.

ಮೈಸೂರಿನ ರೀತಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿನ ಅನೇಕ ಪ್ರವಾಸಿ ತಾಣಗಳಿಗೆ ಪ್ರಾಮುಖ್ಯತೆ ನೀಡಿ ಐತಿಹಾಸಿಕ ಪ್ರವಾಸ ತಾಣವಾಗಿ ಮಾಡಲು ಅಧಿಕಾರಿಗಳಿಗೆ ಹೇಳಿದರಲ್ಲದೆ,   ಅಮೃತ ಯೋಜನೆಯಡಿ ಶುದ್ಧಕುಡಿಯುವ ನೀರಿನ ಘಟಕಗಳ ಸ್ಥಾಪನೆ ಕಾರ್ಯವು ಮಂದಗತಿಯಲ್ಲಿ ಸಾಗುತ್ತಿದ್ದು ಇದರ ಬಗ್ಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆಆರ್‍ಎಸ್ ಪೂರ್ವದಲ್ಲಿ ವಲಸೆ ಬಂದಿರುವ ಭೋವಿ ಜನಾಂಗದವರು ನೆಲೆಸಿದ್ದು ಅವರಿಗೆ ಮೂಲಸೌಕರ್ಯಗಳು ಹಾಗೂ ಆರೋಗ್ಯ ಸಂಬಂಧ ಸೌಲಭ್ಯಗಳು ಸಿಗದ ಹಿನ್ನಲೆಯಲ್ಲಿ ಬಂದಿರುವ ದೂರಿನ ಮೇರೆಗೆ ಮಾಹಿತಿಯನ್ನು ಪಡೆದರು. ಜಿಲ್ಲೆಯಲ್ಲಿ ವಿದ್ಯುತ್ ಅವಘÀಡಗಳು ಪದೇ ಪದೇ ಸಂಭವಿಸುತ್ತಿದ್ದು  ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಸೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು ಮತ್ತು ಜಿಲ್ಲೆಯಲ್ಲಿ ಆಧಾರ್ ತಿದ್ದುಪಡಿ ಕೇಂದ್ರಗಳು ಎಷ್ಟಿವೆ ಎಂದು ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷಾ ಫಲಿತಾಂಶ ಬರುವುದು ನಿಧಾನವಾಗಿದ್ದು ಇದರಿಂದ ಪರೀಕ್ಷೆಗೆ ಒಳಪಟ್ಟ ಜನರಲ್ಲಿ ಆತಂಕ ಹೆಚ್ಚಾಗುತ್ತಿದ್ದು ಇದರ ಬಗ್ಗೆ ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಕೊಳಗೇರಿ ಪ್ರದೇಶಗಳಲ್ಲಿ ಮನೆ ನಿರ್ಮಾಣವಾಗುವಂತೆ, ರೈತರ ಆತ್ಮಹತ್ಯೆ ಸಮಸ್ಯೆಗಳು ಮರುಕಳಿಸದಂತೆ ಸಂಬಂಧಿತ ಅಧಿಕಾರಿಗಳಿಗೆ ಹೇಳಿದರು. ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮವಾಗಿ ಸಾಗಾಣಿಕೆಯ ಕುರಿತು ಗಮನಕ್ಕೆ ಬಂದಿದ್ದು ಹಾಗೂ ಮೈಸೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಮರಗಳು ಕತ್ತರಿಸಿದ್ದು ಅವುಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

See also  ನಿಯಮ ಉಲ್ಲಂಘಿಸುತ್ತಿರುವ ವಾಹನಗಳ ವಿರುದ್ಧ ಕ್ರಮಕ್ಕೆ ಟ್ಯಾಕ್ಸಿ ಚಾಲಕರ ಒತ್ತಾಯ

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಜುಲ್ಫಿಕರ್ ಉಲ್ಲಾ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರಾದ ನಾಗರತ್ನಸ್ವಾಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು