News Kannada
Friday, September 30 2022

ಕರ್ನಾಟಕ

ತಲಕಾವೇರಿ ಇಂಗು ಗುಂಡಿಗಳನ್ನು ಮುಚ್ಚದಿದ್ದಲ್ಲಿ ಪ್ರತಿಭಟನೆ : ಜೆಡಿಎಸ್ ಎಚ್ಚರಿಕೆ - 1 min read

Photo Credit :

ತಲಕಾವೇರಿ ಇಂಗು ಗುಂಡಿಗಳನ್ನು ಮುಚ್ಚದಿದ್ದಲ್ಲಿ ಪ್ರತಿಭಟನೆ : ಜೆಡಿಎಸ್ ಎಚ್ಚರಿಕೆ

ಮಡಿಕೇರಿ: ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿದು ಅನಾಹುತ ಸಂಭವಿಸಲು ಕಾರಣವಾಗಿರುವ ಇಂಗು ಗುಂಡಿಗಳನ್ನು ಅರಣ್ಯ ಇಲಾಖೆ ತಕ್ಷಣ ಮುಚ್ಚದಿದ್ದಲ್ಲಿ ಜಿಲ್ಲಾ ಜಾತ್ಯತೀತ ಜನತಾದಳದ ವತಿಯಿಂದ ಅರಣ್ಯ ಭವನದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ವರ್ಷ ಗಜಗಿರಿ ಬೆಟ್ಟ ಕುಸಿದು ಅರ್ಚಕ ಕುಟುಂಬ ಅಸುನೀಗಲು ಅರಣ್ಯ ಇಲಾಖೆ ನಿರ್ಮಿಸಿರುವ ಇಂಗು ಗುಂಡಿಗಳೇ ಕಾರಣವಾಗಿದ್ದು, ದುರ್ಘಟನೆಗೆ ಅರಣ್ಯ ಇಲಾಖೆಯೇ ನೇರ ಹೊಣೆ ಎಂದು ಆರೋಪಿಸಿದರು. ಮತ್ತೊಂದು ಅನಾಹುತ ಸಂಭವಿಸುವ ಮೊದಲು ಇಂಗು ಗುಂಡಿಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದರು.

ಬೆಟ್ಟದ ಮೇಲೆ ಸುಮಾರು 5,400 ಇಂಗು ಗುಂಡಿಗಳನ್ನು ತೆಗೆದಿದ್ದು, ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ಇದೆಯೆಂದು ಆರೋಪಿಸಿದರು. ಇಂಗು ಗುಂಡಿಗಳನ್ನು ಮುಚ್ಚದಿದ್ದಲ್ಲಿ ಮುಂದಿನ ವರ್ಷ ಬ್ರಹ್ಮಗಿರಿ ಬೆಟ್ಟಕ್ಕೂ ಅಪಾಯ ಎದುರಾಗಲಿದೆ. ಒಂದು ವೇಳೆ ಅನಾಹುತ ಸಂಭವಿಸಿದರೆ ಅರ್ಧ ಭಾಗಮಂಡಲ ಗ್ರಾಮ ನಿರ್ನಾಮವಾಗುವ ಸಾಧ್ಯತೆಗಳಿದೆ ಎಂದು ಗಣೇಶ್ ಆತಂಕ ವ್ಯಕ್ತಪಡಿಸಿದರು.

ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಸಾವಿರಾರು ಇಂಗು ಗುಂಡಿಗಳನ್ನು ಅರಣ್ಯ ಇಲಾಖೆ ನಿರ್ಮಿಸುತ್ತಿದ್ದಾಗ ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಪರಿಸರವಾದಿಗಳು ಜಾಣ ಮೌನಕ್ಕೆ ಶರಣಾಗಿದ್ದು ಯಾಕೆ ಎಂದು ಅವರು ಪ್ರಶ್ನಿಸಿದರು. ಸ್ಥಳೀಯ ಜನರ ಅಭಿಪ್ರಾಯ ಮತ್ತು ಜಿಲ್ಲಾಡಳಿತದ ಅನುಮತಿ ಪಡೆಯದೆ ಅರಣ್ಯ ಇಲಾಖೆ ಅವೈಜ್ಞಾನಿಕವಾಗಿ ಜೆಸಿಬಿ ಯಂತ್ರಗಳ ಮೂಲಕ ಬೆಟ್ಟದಲ್ಲಿ ಇಂಗು ಗುಂಡಿಗಳನ್ನು ನಿರ್ಮಿಸಿ ಅನಾಹುತಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರಾಜಾಸೀಟ್‍ನಲ್ಲಿ ಕಾಮಗಾರಿ ಬೇಡ

 ಬೆಟ್ಟಗುಡ್ಡಗಳಲ್ಲಿ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳನ್ನು ಬಳಸಿ ಕಾಮಗಾರಿಗಳನ್ನು ನಡೆಸಬಾರದೆಂದು ಸೂಚನೆ ಇದ್ದರು, ನೈಜ ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ರಾಜಾಸೀಟ್ ಉದ್ಯಾನವನದಲ್ಲಿ ಕೂಡ ಯಂತ್ರಗಳನ್ನು ಬಳಸಿ ಬೆಟ್ಟವನ್ನು ಕೊರೆಯಲಾಗುತ್ತಿದೆ. ಇದನ್ನು ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಪ್ರವಾಸೋದ್ಯಮದ ಹೆಸರಿನಲ್ಲಿ ನೈಜ ಸೌಂದರ್ಯಕ್ಕೆ ಧಕ್ಕೆ ತರುವ ಬದಲು ಯಥಾಸ್ಥಿತಿಯನ್ನು ಕಾಪಾಡಬೇಕೆಂದು ಗಣೇಶ್ ಒತ್ತಾಯಿಸಿದರು.

 

See also  ಪ್ರೀತಿ ಸಿಗಲಿಲ್ಲ ಎಂದು ಕಲಿತ ಶಾಲೆಗೆ ಬೆಂಕಿ ಕೊಟ್ಟ ಪ್ರೇಮಿ…
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು