News Kannada
Sunday, October 02 2022

ಕರ್ನಾಟಕ

ಸರ್ಕಾರಿ ಜಮೀನು ಗುರುತಿಸಿ ಕಾಯ್ದಿರಿಸಲು ಡಿಸಿ ಸೂಚನೆ - 1 min read

Photo Credit :

ಸರ್ಕಾರಿ ಜಮೀನು ಗುರುತಿಸಿ ಕಾಯ್ದಿರಿಸಲು ಡಿಸಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ ಸರ್ಕಾರದ ಇಲಾಖೆಗಳು ಅನುಷ್ಠಾನಗೊಳಿಸುವ ಯೋಜನೆ ಸೌಲಭ್ಯಗಳಿಗಾಗಿ ಕಾಯ್ದಿರಿಸಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲೆಯ ಯಾವುದೇ ಭಾಗದಲ್ಲಾಗಲಿ ಸರ್ಕಾರಿ ಖರಾಬು ಅಥವಾ ಗೋಮಾಳ ಇರಲಿ ಯಾವುದೇ ಸರ್ಕಾರಿ ಜಮೀನುಗಳನ್ನು ಗುರುತಿಸಿ ಸರ್ಕಾರದ ಸಂಸ್ಥೆಗಳಿಗೆ ಕಾಯ್ದಿರಿಸಬೇಕು, ವಸತಿ ಯೋಜನೆ, ಸ್ಮಶಾನ, ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಘನತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಅನುಷ್ಠಾನ ದಂತಹ ಪ್ರಮುಖ ಯೋಜನೆಗಳಿಗೆ ಸರ್ಕಾರಿ ಭೂಮಿಯನ್ನು ಬಳಕೆ ಮಾಡಿಕೊಳ್ಳುವ ಸಂಬಂಧ ಭೂ ಬ್ಯಾಂಕ್ ಕ್ರೋಢಿಕರಣಕ್ಕೆ ಅಧಿಕಾರಿಗಳು ಕಾಯೋನ್ಮುಖರಾಗಬೇಕೆಂದು ತಿಳಿಸಿದರು.

ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ವಸತಿ ಯೋಜನೆಗಾಗಿ ಕನಿಷ್ಠ 3 ರಿಂದ 5 ಎಕರೆ ಜಮೀನುಗಳನ್ನು ಗುರುತಿಸಬೇಕು. ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಸತಿ ಯೋಜನೆಯ ನೋಡೆಲ್ ಅಧಿಕಾರಿಗಳು ಒಟ್ಟಾಗಿ ಜಮೀನುಗಳನ್ನು ವಸತಿ ನಿರ್ಮಾಣಕ್ಕಾಗಿ ಗುರುತಿಸಲು ಮುಂದಾಗಬೇಕು ಎಂದರು.

ಜಿಲ್ಲೆಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ತಾಲ್ಲೂಕುವಾರು ಬಾಕಿಯಿರುವ ಸರ್ಕಾರಿ ಜಮೀನುಗಳ ಒತ್ತುವರಿ ಪ್ರಕರಣಗಳ ಬಗ್ಗೆ ತುರ್ತಾಗಿ ಗಮನಹರಿಸಿ ತೆರವುಗೊಳಿಸಲು ಕಾರ್ಯೋನ್ಮುಖರಾಗಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಮಾಲಿಕತ್ವ ಹೊಂದಿರುವ ಇಲಾಖೆಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು  ಮೂರನೇ ಶನಿವಾರದಂದು ನಿರ್ವಹಿಸಲು ಈಗಾಗಲೇ ಸೂಚಿಸಲಾಗಿದೆ. ಒತ್ತುವರಿ ತೆರವು ಕಾರ್ಯ ಮೊದಲು ಇಲಾಖೆಗಳ ಸಭೆ ನಡೆಸಿ ಪೂರ್ವ ಮಾಹಿತಿಯನ್ನು ನೀಡಬೇಕು. ಈಗಾಗಲೇ ನೀಡಲಾಗಿರುವ ನಿರ್ದೇಶನಗಳನ್ನು ಪಾಲನೆ ಮಾಡಬೇಕು.  ಪೋಡಿ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಹದ್ದಬಸ್ತು, ಇ-ಸ್ವತ್ತು, ತತ್ಕಾಲ್ ಪೋಡಿ, 11-ಇ ಇತರೆ ಬಾಕಿ ಪ್ರಕರಣಗಳನ್ನು ಅತೀ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

See also  ಬೀಚ್ ನಲ್ಲಿ ದಂಪತಿಗೆ ಹಲ್ಲೆ: ಓರ್ವನ ಸೆರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು