News Kannada
Wednesday, February 01 2023

ಕರ್ನಾಟಕ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Photo Credit :

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಮಡಿಕೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ಧೋರಣೆ  ಅನುಸರಿಸುತ್ತಿವೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕರು, ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ವಿರೋಧಿ ಸರ್ಕಾರಗಳು ಅಧಿಕಾರದಲ್ಲಿ ಉಳಿಯಲು ಯೋಗ್ಯವಲ್ಲ ಎಂದು ದಿಕ್ಕಾರ ಕೂಗಿದ ಕಾರ್ಮಿಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕು ತಹಶೀಲ್ದಾರ್ ಮೂಲಕ ರಾಜ್ಯಪಾಲರು, ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಜೇಸೀ ವೇದಿಕೆ ಮುಂಭಾಗ ಪ್ರತಿಭಟನಾ ಸಭೆ ನಡೆಸಿ, ತಾಲ್ಲೂಕು ಕಚೇರಿಗೆ  ಜಾಥ ಮೂಲಕ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗ್ರಾ.ಪಂ. ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಕೇಂದ್ರ ಸರ್ಕಾರವು ಕಾರ್ಮಿಕ, ರೈತ, ಬಡ ಜನರ ವಿರೋಧಿಯಾಗಿ ಆಡಳಿತ ನಡೆಸುತ್ತಿದ್ದು, ದುಡಿಯುವ ವರ್ಗವನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಬಂಡವಾಳಶಾಹಿಗಳ ಪರವಾಗಿ ಆಡಳಿತ ನಡೆಸುತ್ತಿವೆ ಎಂದು ಆರೋಪಿಸಿದರು.

ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ  ಗೋವಿಂದದಾಸ್ ಮಾತನಾಡಿ, ಈಗಾಗಲೇ ಕಾರ್ಮಿಕರಿಗೆ ಪೂರಕವಾಗಿದ್ದ 47 ಯೋಜನೆಗಳನ್ನು ತೆಗೆದುಹಾಕುವ ಮೂಲಕ ಕಾರ್ಮಿಕರ ಜೀವನದ ಮೇಲೆ ಬರೆ ಎಳೆದು, ಬಂಡವಾಳಶಾಹಿಗಳ ಬೊಕ್ಕಸವನ್ನು ತುಂಬಿಸುತ್ತಿದೆ. ಸರ್ಕಾರದ ಅಂಗವಾಗಿದ್ದ ವಿವಿಧ ಸಂಸ್ಥೆಗಳ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ. ಸೋಮಪ್ಪ ಮಾತನಾಡಿ, ಈಗಾಗಲೇ ಬ್ಯಾಂಕ್‍ಗಳ ವಿಲೀನದಿಂದಾಗಿ ಸಂಕಷ್ಟ ಎದುರಿಸುವಂತಾಗಿದ್ದು, ಮುಂದೊಂದು ದಿನ ಬ್ಯಾಂಕ್‍ಗಳನ್ನೂ ಖಾಸಗೀಕರಣ ಮಾಡುವ ಹುನ್ನಾರ ನಡೆಸಲಾಗುತ್ತಿದೆ. ಇದರೊಂದಿಗೆ ಎಲ್‍ಐಸಿ, ರೈಲ್ವೇ, ವಿಮಾನ ನಿಲ್ದಾಣ, ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಲಾಗುತ್ತಿದ್ದು, ಕಾರ್ಮಿಕ ವರ್ಗ ಜೀವನ ಭದ್ರತೆಯನ್ನು ಕಳೆದುಕೊಳ್ಳುತ್ತಿದೆ. ಇದರೊಂದಿಗೆ ನಿರುದ್ಯೋಗ ಪ್ರಮಾಣವೂ ಅಧಿಕವಾಗುತ್ತಿದೆ. ಕಾರ್ಮಿಕ ವಿರೋಧಿ ಧೋರಣೆಗಳನ್ನು ಮುಂದುವರೆಸಿದರೆ ರಾಷ್ಟ್ರಾದ್ಯಂತ ಕಾರ್ಮಿಕರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ತಾಲೂಕು ಉಪ ಕಾರ್ಯದರ್ಶಿ ಜಮುನ, ಬಿಸಿಯೂಟ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಕಾವೇರಿ, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನವೀನ್, ಐಎನ್‍ಟಿಯುಸಿ ನಗರಾಧ್ಯಕ್ಷ ಗಣೇಶ್, ಎಸ್.ಸಿ. ಒಕ್ಕೂಟದ ಉಪಾಧ್ಯಕ್ಷ ಹೊನ್ನಪ್ಪ, ಸೂರಿಗಾಗಿ ಸಮಿತಿ ಅಧ್ಯಕ್ಷ ಅಣ್ಣಪ್ಪ, ಕಾರ್ಯದರ್ಶಿ ಸಿಂಧು, ಎಐಟಿಯುಸಿ ತಾಲ್ಲೂಕು ಕಾರ್ಯದರ್ಶಿ ಪಿ.ಟಿ. ಸುಂದರ ಹಾಗೂ ಮತ್ತಿತರ ಕಾರ್ಯಕರ್ತರು ಇದ್ದರು.

See also  ಸರ್ಕಾರೀ ನೌಕರರ ಅವಲಂಬಿತರಿಗೂ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು