News Kannada
Monday, January 30 2023

ಕರ್ನಾಟಕ

ನಾಳೆ ಮಡಿಕೇರಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Photo Credit :

ನಾಳೆ ಮಡಿಕೇರಿಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

ಮಡಿಕೇರಿ: ‘ಹೆಚ್‍ಐವಿ ಸೋಂಕಿನ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿಯ ಹಂಚಿಕೆ’ ಎಂಬ ಘೋಷ ವಾಕ್ಯದೊಂದಿಗೆ  ವಿಶ್ವ ಏಡ್ಸ್ ದಿನ-2020 ನ್ನು   ಡಿ.2 ರಂದು ನಗರದಲ್ಲಿ ಸರಳವಾಗಿ ಆಚರಿಸಲಾಗುವುದೆಂದು  ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಎನ್. ಆನಂದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಮತ್ತು ಕೊಡಗು ಜಿ.ಪಂ., ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಡಿಕೇರಿ ರೋಟರಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10.30ಕ್ಕೆ ನಗರದ ರೋಟರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು  ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ವಿ.ವಿ.ಮಲ್ಲಾಪುರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ. ಗಣಪತಿ ಪಾಲ್ಗೊಳ್ಳಲಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಾರಕ ರೋಗ ಹೆಚ್‍ಐವಿ ಸೋಂಕಿತರ ಪ್ರಮಾಣ ಇಳಿಮುಖವಾಗಿದ್ದು, 2009 ರಲ್ಲಿ ಸಾಮಾನ್ಯರಲ್ಲಿ ಶೇ. 2.9 ರಷ್ಟಿದ್ದ ಹೆಚ್‍ಐವಿ ಸೋಂಕಿತರ ಪ್ರಮಾಣ ಪ್ರಸಕ್ತ ಸಾಲಿನಲ್ಲಿ ಶೇ.0.4 ಕ್ಕೆ ಇಳಿದಿದೆ. ಗರ್ಭಿಣಿಯರಲ್ಲಿ 0.43 ರಷ್ಟಿದ್ದ ಪ್ರಮಾಣ ಇದೀಗ 0.03ಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ 2009ರಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಎಆರ್‍ಟಿ ಕೇಂದ್ರವನ್ನು ಆರಂಭಿಸಲಾಗಿದ್ದು, ಇದುವರೆಗೆ ಈ ಕೇಂದ್ರದಲ್ಲಿ 2200 ಹೆಚ್‍ಐವಿ ಸೋಂಕಿತರು ನೋಂದಾಯಿಸಲ್ಪಟ್ಟಿದ್ದಾರೆ. ಅಲ್ಲದೆ 1798 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ರೋಗದಿಂದ 648 ಮಂದಿ ಸಾವನ್ನಪ್ಪಿರುವುದಾಗಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 7 ಇಐಡಿ ಪರೀಕ್ಷಾ ಕೇಂದ್ರಗಳಿದ್ದು, ಹೆಚ್‍ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಶಿಶುವಿನ ಶೀಘ್ರ ತಪಾಸಣಾ ಕೇಂದ್ರಗಳಲ್ಲಿ 2011 ರಿಂದ ಹೆಚ್‍ಐವಿ ಸೋಂಕಿತ ತಾಯಂದಿರಿಗೆ ಹುಟ್ಟಿದ ಮಕ್ಕಳಲ್ಲಿ 6 ವಾರದಿಂದ 18 ತಿಂಗಳ ಒಳಗಿನ 112 ಮಕ್ಕಳಿಗೆ ಡಿಎನ್‍ಎ, ಪಿಪಿಆರ್ ಪರೀಕ್ಷೆಯನ್ನು ನಡೆಸಿದ್ದು,  ಅವರಲ್ಲಿ 5 ಮಕ್ಕಳಿಗೆ ಸೋಂಕು ತಗುಲಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಸುಮಾರು 780 ದಮನಿತ ಮಹಿಳೆಯರು ಹಾಗೂ ಸುಮಾರು 203 ಪುರುಷ- ಪುರುಷರೊಂದಿಗೆ  ಲೈಂಗಿಕ ಸಂಪರ್ಕವಿರುವವರು ನೋಂದಾಯಿಸಲ್ಪಟ್ಟಿದ್ದಾರೆ ಎಂದು  ತಿಳಿಸಿದರು.

2020 ರಲ್ಲಿ 67 ಮಂದಿಗೆ ಸೋಂಕು-ತಾಲ್ಲೂಕುವಾರು ಹೆಚ್‍ಐವಿ ಸೋಂಕಿತರ ಅಂಕಿ ಅಂಶಗಳ ಅನ್ವಯ ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಮಡಿಕೇರಿ ತಾಲ್ಲೂಕಿನಲ್ಲಿ 13 , ಸೋಮವಾರಪೇಟೆ ತಾಲ್ಲೂಕಿನಲ್ಲಿ 16, ವಿರಾಜಪೇಟೆ ತಾಲ್ಲೂಕಿನ 36 ಮಂದಿಯಲ್ಲಿ ಹಾಗೂ ಇತರೆ ಜಿಲ್ಲೆಗಳಿಂದ ಬಂದಿರುವ 2 ಮಂದಿ ಸೇರಿದಂತೆ ಒಟ್ಟು 67 ಮಂದಿಯಲ್ಲಿ ಹೆಚ್‍ಐವಿ ಸೋಂಕು ಇರುವುದು ಪತ್ತೆಯಾಗಿದೆಯೆಂದರು.

See also  ಕೊಡಗಿನಲ್ಲಿ ಆತಂಕ ಸೃಷ್ಠಿಸುತ್ತಿರುವ ಐಗೂರು ಪ್ರಕರಣ

ಮಾಹಿತಿ ಶಿಕ್ಷಣ ಮತ್ತು ಸಂವಹನ ಹಾಗೂ ಮುಖ್ಯವಾಹಿನಿ ಕಾರ್ಯಕ್ರಮದಡಿಯಲ್ಲಿ ಹೆಚ್‍ಐವಿ-ಏಡ್ಸ್ ಜಾಗೃತಿ ಭಿತ್ತಿ ಪತ್ರಗಳು, ಪೋಸ್ಟರ್‍ಗಳು, ಹೋರ್ಡಿಂಗ್‍ಗಳು, ಜಾನಪದ ಕಲಾತಂಡಗಳು ಮತ್ತು ಗೋಡೆ ಬರಹಗಳ ಮೂಲಕ ಜನ ಜಾಗೃತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ 17 ಕಾಲೇಜುಗಳಲ್ಲಿ ರೆಡ್‍ರಿಬ್ಬನ್ ಕ್ಲಬ್‍ಗಳನ್ನು ಸ್ಥಾಪಿಸಿ 84 ಶಾಲೆ ಹಾಗೂ 21 ಪದವಿ ಪೂರ್ವ ಕಾಲೇಜುಗಳಲ್ಲಿ ಹದಿಹರೆಯದ ವಿದ್ಯಾರ್ಥಿಗಳಿಗೆ ಆರೋಗ್ಯಕರ ಮತ್ತು ಹೆಚ್‍ಐವ ಏಡ್ಸ್ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಕಲಿ ಚಿಕಿತ್ಸಕರ ಬಗ್ಗೆ ಮಾಹಿತಿ ನೀಡಿ- ಹೆಚ್‍ಐವಿ ಮತ್ತು ಏಡ್ಸ್‍ಗೆ ಚಿಕಿತ್ಸೆ ಇದೆಯಾದರು, ಸಂಪುರ್ಣ ಗುಣಮುಖರನ್ನಾಗಿ ಮಾಡಲು ಸಾಧ್ಯವಿಲ್ಲ.  ಅಗತ್ಯ ಲಸಿಕೆಗಾಗಿ ಸಂಶೋಧನೆಗಳು ನಡೆಯುತ್ತಿದೆ. ಹೀಗಿದ್ದೂ ಕೆಲ ಖಿಡಿಳಿ ಚಿಕಿತ್ಸಕರು ಹೆಚ್‍ಐವಿ, ಢಡ್ಸ್ ಗುಣಪಡಿಸುತ್ತೇವೆಂದು ಸುಳ್ಳಿನ ಭರವಸೆಗಳನ್ನೂ ನೀಡಿ ವಂಚಿಸುತ್ತಿದ್ದಾರೆ.  ಇಂತಹವರನ್ನು ದೂರವಿಡುವಂತೆ ಮನವಿ ಮಾಡಿದ ಅವರು, ಇಂತಹವರು ಯಾರಾದರು ಕಂಡು ಬಂದಲ್ಲಿ  ಹೆಚ್‍ಐವಿ ಉಚಿತ ಸಹಾಯವಾಣಿ 1097 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಕ್ರಮ ಜರುಗಿಸುವುದಾಗಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು