ಗುಂಡ್ಲುಪೇಟೆ: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಒಂದಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ರಾಜಕೀಯ ಜಂಜಾಟದ ನಡುವೆಯೂ ಕೆಲವು ಸಚಿವರು ಬಂಡೀಪುರದಲ್ಲಿ ಮಂಗಳವಾರ ಸಫಾರಿ ಮಾಡುವ ಮೂಲಕ ಒಂದಷ್ಟು ರಿಲ್ಯಾಕ್ಸ್ ಮೂಡ್ನಲ್ಲಿದ್ದದ್ದು ಕಂಡು ಬಂದಿತು.
ಮಂಗಳವಾರ ಬಿಜೆಪಿ ಪಕ್ಷದಿಂದ ಗ್ರಾಮಸ್ವರಾಜ್ ಸಮಾವೇಶವನ್ನು ಕೊಳ್ಳೇಗಾಲದಲ್ಲಿ ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಸೋಮವಾರವೇ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ್ದ ಸಚಿವದ್ವಯರು ಬಂಡೀಪುರ ಸಮೀಪದ ಜಂಗಲ್ ರೆಸಾರ್ಟ್ ವಾಸ್ತವ್ಯ ಹೂಡಿದ್ದರು.
ಮಂಗಳವಾರ ಬೆಳಗ್ಗೆ ಬಂಡೀಪುರದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ತೋಟಗಾರಿಕೆ ನಾರಾಯಣಗೌಡ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸಫಾರಿ ನಡೆಸಿ ಪ್ರಕೃತಿ ಸೌಂದರ್ಯವನ್ನು ಸವಿದರು.