ತುಮಕೂರು: ಸ್ಕಿಮ್ಮಿಂಗ್ ಸಾಧನದ ಮೂಲಕ ಎಟಿಎಂ ಕೇಂದ್ರಗಳಲ್ಲಿ ಹಣ ಡ್ರಾ ಮಾಡಿ ಲಪಟಾಯಿಸುತ್ತಿದ್ದ ಉಗಾಂಡಾದ ಮೂಲದ ಐವಾನ್ ಕಾಬೊಂಗೆ ಮತ್ತು ಕೀನ್ಯಾ ಮೂಲದ ಲಾರೆನ್ಸ್ ಮಾಕಾಮು ನನ್ನು ತುಮಕೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಈ ಇಬ್ಬರು ವಂಚನೆಕೊರರು ದೆಹಲಿಯಲ್ಲಿ ವಾಸವಿದ್ದು, ದೆಹಲಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ 42 ಮತ್ತು ಗುಬ್ಬಿ ತಾಲ್ಲೂಕಿನಲ್ಲಿ ಎರಡು ಹಾಗೂ ತುಮಕೂರು ತಾಲ್ಲೂಕಿನಲ್ಲಿ 42 ಪ್ರಕರಣಗಳು ದಾಖಲಾಗಿದ್ದವು.
ಖತರ್ನಾಕ್ ಐಡಿಯಾ ಬಳಸಿದ ವಂಚಕರು ಚೆನ್ನೈ, ಮುಂಬೈ, ತಮಿಳುನಾಡು ಸೇರಿದಂತೆ ವಿವಿಧ ಕಡೆಗಳ ಎಟಿಎಂ ಕೇಂದ್ರಗಳಿಂದ ಹಣವನ್ನು ಡ್ರಾ ಮಾಡಿದ್ದು, ಆರೋಪಿಗಳಿಂದ 20 ನಕಲಿ ಎಟಿಎಂ ಕಾರ್ಡ್ ಗಳು, ಸ್ಕಿಮ್ಮಿಂಗ್ ಸಾಧನ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೆಹಲಿಯಿಂದ ತುಮಕೂರಿಗೆ ಏಕೆ ಬಂದರು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.