ಶಿವಮೊಗ್ಗ: ಇಂದು ವಿಧಾನ ಪರಿಷತ್ ಕಲಾಪದಲ್ಲಿ ನಡೆದ ತಳ್ಳಾಟ ಘಟನೆಯನ್ನು ಟೀಕಿಸಿ, ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುವುದು ತಮ್ಮ ಆಜನ್ಮ ಸಿದ್ಧ ಹಕ್ಕು ಎಂದು ಭಾವಿಸಿದ್ದಾರೆ. ಈ ಸ್ವಭಾವ ಇತ್ತೀಚಿನದಲ್ಲ. ನೆಹರೂ ಕುಟುಂಬದವರು ಸೇರಿದಂತೆ ಹಲವಾರು ನಾಯಕರುಗಳು ವಂಶ ಪಾರಂಪರ್ಯವಾಗಿ ಅಧಿಕಾರ ನಡೆಸಬೇಕು ಎಂಬ ಮನೋಭಾವ ಕಾಂಗ್ರೆಸ್ ನವರದ್ದಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.
ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆರಂಭದಲ್ಲಿ ಮಾಡಿದ ತಪ್ಪಿನಿಂದಾಗಿ ಇಂಥ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಈ ರೀತಿಯ ಪ್ರವೃತ್ತಿ ನಡೆಸಿಕೊಂಡು ಬಂದಿದೆ. ಈ ಹಿಂದೆ ನಾನು ಸಭಾಪತಿಯಾಗಿದ್ದಾಗಲೂ ಇದೇ ಪರಿಸ್ಥಿತಿ ಅನುಭವಿಸಿದ್ದೆ. ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಅದೇ ರೀತಿ ಇಂದು ನಡೆದಿದ್ದು ಇಂದಿನ ಈ ಘಟನೆಗೆ ಕಾಂಗ್ರೆಸ್ ಕಾರಣ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.