ವಿಜಯಪುರ: 14 ವರ್ಷದ ವಿಕಲಚೇತನ ಅಪ್ರಾಪ್ತ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಪ್ರಕರಣ ವಿಜಯಪುರದಲ್ಲಿ ನಡೆದಿದ್ದು, ದೂರು ನೀಡಿದರೂ ಪೊಲೀಸರು ರಾಜಿ ಸಂಧಾನ ಮಾಡಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಮುದ್ದೇಬಿಹಾಳ ತಾಲೂಕು ನಡಹಳ್ಳಿ ಗ್ರಾಮದಲ್ಲಿ 14 ವರ್ಷದ ಬುದ್ಧಿಮಾಂದ್ಯತೆ ಬಾಲಕಿ ಮೇಲೆ ರುದ್ರಗೌಡ ಪಾಟೀಲ (52) ಎಂಬಾತ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಸ್ಥಳಕ್ಕೆ ಬಂದ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿತ್ತು ಸ್ಥಳೀಯ ಪೊಲೀಸ್ ಠಾಣೆಯಲ್ಲಿದಾಖಲಿಸಲು ಹೋದಾಗ ಅವರು ಸಂಧಾನ ಮಾಡಿಕೊಳ್ಳುವಂತೆ ಹೇಳಿದ್ದಾರೆ. ಅದಕ್ಕೆ ವಿರೋಧಿಸಿ ವಿಕಲಚೇತನರು ಪ್ರತಿಭಟಿಸಿದಾಗ ಪೊಲೀಸರು ದೂರನ್ನು ದಾಖಲಿಸಿಕೊಂಡಿರುವ ವಿಷಯ ಈಗ ಬಯಲಾಗಿದೆ.
ಇಷ್ಟಾದರೂ ಎಸೈ ಗಂಗೂಬಾಯಿ ವಿಕಲಚೇತನೆಯ ಮೇಲೆ ಅತ್ಯಾಚಾರ ಯತ್ನ ನಡೆದಿಲ್ಲ ಎಂದು ವಾದಿಸಿದ್ದಾರೆ. ಇದಲ್ಲದೇ ಪಾಲಕರ ಮೇಲೆ ಒತ್ತಡ ಹೇರಿ ಠಾಣೆಯಲ್ಲಿ ಬರೆಸಿಕೊಂಡಿದ್ದ ಪತ್ರವನ್ನು ಉಪಾಧ್ಯೆ ಅವರಿಗೆ ತೋರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.