ಬಾಗಲಕೋಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಇದೀಗ ಹುನಗುಂದದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಳಕಲ್ ನಗರದ 9 ಮಂದಿಗೆ ಪೊಲೀಸರು ನೊಟೀಸ್ ನೀಡಲು ಹೋಗಿದ್ದರು. ನೊಟೀಸ್ ನೀಡಲು ಹೋದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೆ, ವಿಚಾರಣೆಗೆ ಹಾಜರಾಗದಂತೆ ಪ್ರಚೋದನೆ ನೀಡಿದ ಆರೋಪದ ಇದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಇಳಕಲ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 143, 147, 353, 504, 506 ಕಲಂ ಅಡಿಯಲ್ಲಿ ಮಾಜಿ ಶಾಸಕ ಸೇರಿದಂತೆ ನಾಲ್ವರ ವಿರುದ್ಧ ಹುನಗುಂದ ಸರ್ಕಲ್ ಇನ್ ಸ್ಪೆಕ್ಟರ್ ಅಯ್ಯನಗೌಡ ಪಾಟೀಲ ನೇತೃತ್ವದಲ್ಲಿ ಪೊಲೀಸರು ಎಫ್ ಐಅರ್ ದಾಖಲಿಸಿಕೊಂಡಿದ್ದಾರೆ.