ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಲಲಿತಾ ಎಂಬುವವರು ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ.
ಮೂಲತಹ ಭದ್ರಾವತಿಯ ಶಿಕ್ಷಕ ವೆಂಕಟೇಶ್ ಎಂಬುವವರ ಪುತ್ರಿಯಾಗಿದ್ದು, ಕಾಲೇಜಿನ ವಿದ್ಯಾರ್ಥಿನಿಲಯದಲ್ಲಿ ತನ್ನ ಸ್ನೇಹಿತ ಇಲ್ಲದ ಸಮಯದಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗಿದೆ.
ದೊಡ್ಡಪೇಟೆಯ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗುತ್ತಿದೆ.