News Kannada
Saturday, January 28 2023

ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲಾಗುವುದು: ಸಚಿವ ಈಶ್ವರಪ್ಪ

Photo Credit :

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲಾಗುವುದು: ಸಚಿವ ಈಶ್ವರಪ್ಪ

ಶಿವಮೊಗ್ಗ : ಶಾಲೆಗಳಲ್ಲಿ 6.5 ಕೋಟಿ ರೂಗಳ ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್’, ಓವರ್ಹೆಡ್ ಪ್ರೋಜೆಕ್ಟರ್, ಲ್ಯಾಪ್ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದರು.

ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿದ ಈಶ್ವರಪ್ಪ ನಂತರ ಪತ್ರಕರ್ತರೊಂದಿಗೆ ಮಾತನಾಡಿ, ಕಳೆದ ವರ್ಷದ ಮಳೆಗಾಲದ ಅವಧಿಯಲ್ಲಿ ಹಾನಿಗೊಳಗಾಗಿದ್ದ ನಗರದ 87 ಶಾಲೆಗಳನ್ನು ದುರಸ್ತಿಗೆ ಒಳಪಡಿಸಲಾಗಿದೆ ಈಗಾಗಲೇ 70 ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದರು.

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿ ಅನುದಾನವನ್ನು ಕಾಯ್ದಿರಿಸಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

See also  ಅರ್ಜಿ ಗ್ರಾಮದಲ್ಲಿ ನಿರ್ಮಾಣದ ಹಂತದ ಮನೆಯಲ್ಲಿ ಮಾಲೀಕನ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು