News Kannada
Sunday, January 29 2023

ಕರ್ನಾಟಕ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ  

Photo Credit :

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ   

 ಶಿವಮೊಗ್ಗ: ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಇಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಕಾರ್ಯಕರ್ತರೊಂದಿಗೆ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾದರು. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ರೈತರು ಸಜ್ಜಾಗಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಗೌರವ ಅಧ್ಯಕ್ಷ ಹೆಚ್.ಆರ್ ಬಸವರಾಜಪ್ಪ, ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಸ್. ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್, ಜಿಲ್ಲಾ ಮುಖಂಡರಾದ ಪಿ.ಶೇಖರಪ್ಪ, ಎಂ.ಡಿ ನಾಗರಾಜ ಉಪಸ್ಥಿತರಿದ್ದರು.

See also  ಯುವಕನ ಹತ್ಯೆ ವಿರುದ್ಧ ಬಿಜೆಪಿ, ಸಂಘಪರಿವಾರ ಉಗ್ರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

190
Ismail M Kutty

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು