ಚಾಮರಾಜನಗರ: ಬೈಕ್ ಅಪಘಾತದಲ್ಲಿ ಪ್ರೇಮಿಗಳಿಬ್ಬರು ಸಾವಿಗೀಡಾಗಿರುವ ಘಟನೆ ಇಲ್ಲಿಗೆ ಸಮೀಪದ ಕೊಳ್ಳೇಗಾಲದ ಚಿಕ್ಕಿಂದುವಾಡಿ ಹಾಗೂ ಮಧುವನಹಳ್ಳಿ ಮುಖ್ಯರಸ್ತೆಯಲ್ಲಿ ಜರುಗಿದೆ.
ಮೃತರನ್ನು ಮಂಡ್ಯ ಜಿಲ್ಲೆಯ ಅರುವು ಗ್ರಾಮದ ಐಶ್ವರ್ಯ(18) ಹಾಗೂ ಆನಂದ್(22) ಎಂದು ಗುರುತಿಸಲಾಗಿದೆ.
ಈ ಇಬ್ಬರೂ ಸೋಮವಾರ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಪೂಜೆ ಮುಗಿಸಿ ಮಂಡ್ಯಕ್ಕೆ ಹಿಂತಿರುಗುತಿದ್ದಾಗ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಚರಂಡಿಗೆ ಬಿದ್ದು ಇಬ್ಬರೂ ಗಾಯಗೊಂಡಿದ್ದರು.
ತಕ್ಷಣ ಸಾರ್ವಜನಿಕರು ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು. ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ಸೇರಿದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳಿದ್ದಾನೆ. ಬೈಕ್ ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.