ಮಡಿಕೇರಿ: ಇಲ್ಲಿಗೆ ಸಮೀಪದ ಪಾಲಿಬೆಟ್ಟ ಗ್ರಾಮ ಪಂಚಾಯತ್ ನ ಎಮ್ಮೆಗುಂಡಿ ಕ್ಷೇತ್ರದಿಂದ ಪುಲಿಯಂಡ ಬೋಪಣ್ಣ ಮೂರನೇ ಬಾರಿಗೆ ಗೆಲುವು ದಾಖಲಿಸಿದ್ದಾರೆ.
ಇವರು ಕಳೆದ ಎರಡು ಬಾರಿ ಜಯಗಳಿಸಿ ಪಂಚಾಯ್ತಿಯ ಅದ್ಯಕ್ಷ ರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಸಲ್ಲಿಸಿದ ಉತ್ತಮ ಸೇವೆಗಾಗಿ ಪಂಚಾಯ್ತಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿಯೂ ಲಭಿಸಿತ್ತು. ಆದರೆ ಚುನಾವಣೆ ಸಂದರ್ಭದಲ್ಲಿ ಇವರ ಮೇಲೆ ದಲಿತ ವ್ಯಕ್ತಿಯೊಬ್ಬರು ನೀಡಿದ ದೂರಿನ ಹಿನ್ನೆಲೆ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂದನದಲ್ಲಿದ್ದರು. ನಂತರ ನ್ಯಾಯಾಲಯದ ಅನುಮತಿ ಪಡೆದು ಜೈಲಿನಿಂದಲೇ ಬಿಜೆಪಿ ಬೆಂಬಲಿತರಾಗಿ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಗೆ ಕೆಲವು ಗಂಟೆಗಳು ಬಾಕಿ ಇರುವಂತೆ ಇವರನ್ನು ಜಾಮೀನಿನ ಮೇಲೆ ನ್ಯಾಯಾಲಯ ಬಿಡುಗಡೆ ಮಾಡಿತ್ತು.
ಆದರೆ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ ಬೋಪಣ್ಣ ಅವರನ್ನು ಮತದಾರ ಕೈ ಬಿಟ್ಟಿಲ್ಲ. ಅವರು ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೂಸುಫ್ ಅವರನ್ನು 66 ಮತಗಳಿಂದ ಸೋಲಿಸಿ ಆಯ್ಕೆ ಆಗಿದ್ದಾರೆ.