ಚಿಕ್ಕಮಂಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನ ಬಗ್ಗೆ ತನಿಖೆ ಆರಂಭವಾಗಿದೆ.
ಧರ್ಮೇಗೌಡ ಅವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಏನಿದೆ ಎನ್ನುವುದನ್ನು ತಿಳಿಯುವ ಪ್ರಯತ್ನ ನಡೆಯುತ್ತಿದೆ. ಕುಟುಂಬದಲ್ಲಿನ ಮನಸ್ತಾಪ, ಇತ್ತೀಚೆಗೆ ವಿಧಾನಪರಿಷತ್ ನಲ್ಲಿ ನಡೆದ ಗಲಾಟೆ, ಎಳೆದಾಟ ಇತ್ಯಾದಿಗಳನ್ನು ಇಟ್ಟುಕೊಂಡು ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ಆರಂಭವಾಘಿದೆ.
ರೈಲ್ವೆ ಪೊಲೀಸರು ಬುಧವಾರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವರು. ಆದರೆ ಡೆತ್ ನೋಟ್ ನಲ್ಲಿ ಏನಿದೆ ಎನ್ನುವ ಬಗ್ಗೆ ಯಾವುದೇ ಮಾಹಿತಿಯನ್ನು ಪೊಲೀಸರು ನೀಡಲು ನಿರಾಕರಿಸಿರುವರು.