ಚಿತ್ರದುರ್ಗ : ಶುಗರ್ ಲೋ ಆದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದಿನ ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ ಎಂದು ವರದಿಗಳು ತಿಳಿಸಿದ್ದು, ಇದರಿಂದಾಗಿ ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.