News Kannada
Sunday, December 04 2022

ಕರ್ನಾಟಕ

ಈ ಜನ್ಮದಲ್ಲಿ ಡಿ.ಕೆ. ಶಿವಕುಮಾರ್ ಆಗಲೀ, ಸಿದ್ಧರಾಮಯ್ಯನವರಾಗಲೀ, ಮುಖ್ಯಮಂತ್ರಿ ಆಗುವುದಿಲ್ಲ: ಸಚಿವ ಈಶ್ವರಪ್ಪ

Photo Credit :

ಈ ಜನ್ಮದಲ್ಲಿ ಡಿ.ಕೆ. ಶಿವಕುಮಾರ್ ಆಗಲೀ, ಸಿದ್ಧರಾಮಯ್ಯನವರಾಗಲೀ, ಮುಖ್ಯಮಂತ್ರಿ ಆಗುವುದಿಲ್ಲ: ಸಚಿವ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇನೆ. ಜನರು ಇವರನ್ನು ಎಲ್ಲಾ ಚುನಾವಣೆಗಳಲ್ಲಿಯೂ ಸೋಲಿಸಿದ್ದಾರೆ. ಆದರೂ ಕಾಂಗ್ರೆಸ್ ಗೆ ಬುದ್ದಿಬಂದಿಲ್ಲವೆಂದು ಸಚಿವ ಈಶ್ವರಪ್ಪ ಹರಿಹಾಯ್ದಿದ್ದಾರೆ.

ಅವರು ಮಾಧ್ಯಮಗಳ ಜೊತೆ ಮಾತನಾಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ. ಉಪಚುನಾವಣೆಗಳಲ್ಲಿ ಸೋಲಿಸಿದ್ದಾರೆ. ಈಗ ನಡೆದ ಗ್ರಾ.ಪಂ. ಚುನಾವಣೆಯಲ್ಲಿಯೂ ಜನ ಅವರನ್ನ ಸೋಲಿಸಿದ್ದಾರೆ. 28 ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನ ನೀಡಿದ್ದಾರೆ. ಆದರೂ ಕಾಂಗ್ರೆಸ್ ನವರಿಗೆ ಬುದ್ಧಿ ಬಂದಂತೆ ಕಾಣುತ್ತಿಲ್ಲ. ಈಗಲೂ ಸಿದ್ಧರಾಮಯ್ಯನವರು, ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ಹೇಳಿದರು.

ಸಿದ್ಧರಾಮಯ್ಯನವರು ಈಗಲೂ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಸಿದ್ಧರಾಮಯ್ಯ ಅವರಿಗವರೇ, ನಾನೇ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿಕೊಂಡು ಬಿಟ್ಟಿದ್ದಾರೆ ಎಂದು ಲೇವಡಿ ಮಾಡಿದರು.

ಅಷ್ಟೇ ಅಲ್ಲದೆ ಕಾಂಗ್ರೆಸ್ ನ ಕೇಂದ್ರ ನಾಯಕರು ಇವರಿಗೆ ಮುಖ್ಯಮಂತ್ರಿ ಎಂದು ಹೇಳಿದ್ದಾರಾ….? ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕಾಂಗ ಸಭೆಯಲ್ಲಿ ತೀರ್ಮಾನ ಮಾಡಿದ್ದಾರಾ…? ಕಾಂಗ್ರೆಸ್ ಪಕ್ಷದಲ್ಲಿ ಹೇಳೋರು ಕೇಳೋರು ಇಲ್ವಾ ಎಂದು ಪ್ರಶ್ನಿಸಿದ ಸಚಿವರು ಏನೂ ಇಲ್ಲದೇ ಸಿದ್ಧರಾಮಯ್ಯ ಸ್ವಯಂ ಘೋಷಿತ ಮುಖ್ಯಮಂತ್ರಿಯಾಗಿದ್ದಾರೆ.

ಅವರಿಗೆ ಹಗಲು ಕನಸು ಬೀಳುತ್ತಿದೆ. ರಾತ್ರಿ ಕೂಡ ಕನಸು ಬೀಳುತ್ತಿದೆ. ಕನಸು ಬೀಳುತ್ತಿರುವುದಕ್ಕೆ ನಾನೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಹಾಗೂ ಡಿ.ಕೆ. ಶಿವಕುಮಾರ್ ಆಗಲೀ, ಸಿದ್ಧರಾಮಯ್ಯನವರಾಗಲೀ, ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳಿದರು.

See also  ತಂದೆಯಿಂದ ತನ್ನ ಮಗು ಮಾರಾಟ ಶಂಕೆ: ವ್ಯಕ್ತಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು