ದಾವಣಗೆರೆಯ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 1 ಸಾವು, ಇಬ್ಬರ ಸ್ಥಿತಿ ಗಂಭೀರದಾವಣಗೆರೆ : ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಡಿಸ್ಟಿಲರಿ ಕಾರ್ಖಾನೆಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದರ ಪರಿಣಾಮವಾಗಿ ಕಾರ್ಖಾನೆಯಲ್ಲಿದ್ದ ಎರಡು ಮಂದಿ ಕಾರ್ಮಿಕರು ಗಾಯಗೊಂಡಿದ್ದು ಒಬ್ಬರು ಮೃತಪಟ್ಟಿದ್ದಾರೆ.
ಡಿಸ್ಟಿಲರಿ ಕರ್ಖಾನೆಯಲ್ಲಿ ಬೆಳ್ಳಂಬೆಳಗ್ಗೆ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ತಕ್ಷಣವೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದರು. ಮಾಹಿತಿ ದೊರೆತ ಕೆಲವೇ ಸಮಯದಲ್ಲಿ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಆದರೆ ಡಿಸ್ಟಿಲರಿ ಫ್ಯಾಕ್ಟರಿ ಆದ ಕಾರಣ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿಯ ಶಾಖ ಹೆಚ್ಚಾಗಿದ್ದು ಸ್ಥಳೀಯರು ಕಾರ್ಖಾನೆಯಿಂದ 500 ಮೀಟರ್ ದೂರ ಸರಿದರು. ಈ ಅವಘಡದಲ್ಲಿ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸುವ ಸಮಯದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ. ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಸಾವನಪ್ಪಿರುವವರು ರಘು ಎಂದು ಗುರುತಿಸಲಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹರಿಹರ ತಾಲೂಕಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.