ಮಂಡ್ಯ: ರಾಜ್ಯದ ಪ್ರತಿ ಗ್ರಾಮದಲ್ಲೂ ಒಂದು ಸುಸಜ್ಜಿತ ಪಬ್ಲಿಕ್ ಶಾಲೆ ಪ್ರಾರಂಭವಾಗುವುದು. ಒಟ್ಟು 5600 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲೆಗಳ ನಿರ್ಮಾಣ ಪ್ರಾರಂಭವಾಗುವುದು ಎಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಿನ ಯೋಜನೆಗಳ ಬಗ್ಗೆ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನೇರಳಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಮೊದಲನೇ ವರ್ಷದಲ್ಲಿ 50 ಲಕ್ಷ ಮನೆ ನಿರ್ಮಾಣ ಮಾಡಲಿದ್ದು, ಎರಡನೇ ವರ್ಷದಲ್ಲಿ 5600 ಗ್ರಾಪಂ ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಮ್ಮ ಯೋಜನೆಗಳ ರೂಪುರೇಷೆ ಬಗ್ಗೆ ತಿಳಿಸಿದರು.
ಆಸ್ಪತ್ರೆ ಹಾಗೂ ಅದಕ್ಕೆ ಸಂಬಂಧಪಟ್ಟ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗುವುದು. ಚುನಾವಣೆ ಘೋಷಣೆಯಾದ ಬಳಿಕ ಇನ್ನೂ ಹಲವು ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿಯನ್ನು ನೀಡುವೆ ಎಂದು ಚುನಾವಣಾ ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದರು.