News Kannada
Friday, October 07 2022

ಕರ್ನಾಟಕ

ಬಿಜೆಪಿ ಕುಟುಂಬ ರಾಜಕಾರಣಕ್ಕೆ ಬ್ರೇಕ್; ಬೆಳಗಾವಿ ಲೋಕಸಭೆ ಕ್ಷೇತ್ರದ ಮೇಲೆ ಹಲವರ ಕಣ್ಣು - 1 min read

Photo Credit :

ಬಿಜೆಪಿ ಕುಟುಂಬ ರಾಜಕಾರಣಕ್ಕೆ ಬ್ರೇಕ್; ಬೆಳಗಾವಿ ಲೋಕಸಭೆ ಕ್ಷೇತ್ರದ ಮೇಲೆ ಹಲವರ ಕಣ್ಣು

ಬೆಳಗಾವಿ: ಅಕಾಲಿಕ ನಿಧನ ಹೊಂದಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಸ್ಥಾನ ಖಾಲಿ ಇದ್ದು, ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅವರ ಕುಟುಂಬದಿಂದಲೇ ಯಾರಾದರೂ ಸ್ಪರ್ಧಿಸಬಹುದು ಅಥವಾ ಟಿಕೆಟ್ ಸಿಗುವುದು ಕಷ್ಟ ಎಂಬ ಗೊಂದಲಕ್ಕೆ ಇನ್ನಷ್ಟು ಪುಷ್ಟಿ ಸಿಕ್ಕಿದೆ.

ಈ ಗೊಂದಲಗಳಿಗೆ ಮುಖ್ಯ ಕಾರಣ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಬ್ರೇಕ್‌ ಹಾಕುವಂತೆ ಹೇಳಿದ್ದರೆ. ಹಾಗೆಯೇ ಇನ್ನೊಂದೆಡೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಿದರೂ ಅವರನ್ನು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವಂತೆ ಕರೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಸಾಧು ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದ್ದು, ಎಲ್ಲ ಕಾರಣಗಳಿಂದ ಆ ಕ್ಷೇತ್ರದ ಮೇಲಿ ಹೆಚ್ಚಿನವರ ಕಣ್ಣು ಬಿದ್ದಿದ್ದು, ಯಾರಿಗೆ ಟಿಕೆಟ್ ಸಿಗಬಹುದು ಎಂಬುದು ಬಹಳ ಕುತೂಹಲಕಾರಿ ಸಂಗತಿಯಾಗಿದೆ.

ಸುರೇಶ್‌ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಮೇಲೆ ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಸೇರಿ 70ಕ್ಕೂ ಅಧಿಕ ಆಕಾಂಕ್ಷಿಗಳು ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ, ಅಂಗಡಿ ಅಭಿಮಾನಿಗಳೂ ಅಂಗಡಿ ಅವರ ಪತ್ನಿ ಮಂಗಲಾ ಅಥವಾ ಮಕ್ಕಳಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸುತ್ತಲೇ ಬಂದಿದ್ದಾರೆ.

See also  ಕಸ ವಿಲೇವಾರಿ ವಿರುದ್ಧ ಪ.ಪಂ.ಸದಸ್ಯರಿಂದ ಪ್ರತಿಭಟನೆ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು