News Kannada
Friday, October 07 2022

ಕರ್ನಾಟಕ

ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ - 1 min read

Photo Credit :

ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಡಯಲ್-112 ಚಾಲನೆ

ಶಿವಮೊಗ್ಗ: ತುರ್ತು ಸಂದರ್ಭಗಳಲ್ಲಿ ಪೊಲೀಸರಿಗೆ ಕರೆ ಮಾಡಿ ತಕ್ಷಣ ಸೇವೆಯನ್ನು ಪಡೆಯುವ ಉದ್ದೇಶದಿಂದ ಆರಂಭಿಸಲಾಗಿರುವ ಡಯಲ್-112 ಪೊಲೀಸ್ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ ಪೂರ್ವ ವಲಯ ಐಜಿಪಿ ರವಿ ಅವರು ಸೋಮವಾರ ಚಾಲನೆ ನೀಡಿದರು.

ಶಿವಮೊಗ್ಗ ಜಿಲ್ಲೆಗೆ ಯೋಜನೆಯಡಿ ಒದಗಿಸಲಾಗಿರುವ 18 ತುರ್ತು ಸ್ಪಂದನ ವಾಹನಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಪೊಲೀಸ್ ಸೇವೆ ಮತ್ತು ಅಗ್ನಿ ಅನಾಹುತ ಸೇವೆಗಳಿಗೆ ಈ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದರು.

ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಈ ಸೇವೆಯನ್ನು ಆರಂಭಿಸಲಾಗಿದ್ದು, ತೊಂದರೆಯಲ್ಲಿರುವ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಬೇಕು. ಕರೆಯನ್ನು ಸ್ವೀಕರಿಸಿದ ಕೇಂದ್ರದಲ್ಲಿ ಅಗತ್ಯ ವಿವರಗಳನ್ನು ಪಡೆದುಕೊಳ್ಳಲಾಗುವುದು. ಎಲ್ಲಾ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಇದ್ದು, ಕರೆಯನ್ನು ಸ್ವೀಕರಿಸಿದ ಸ್ಥಳಕ್ಕೆ ಹತ್ತಿರದಲ್ಲಿರುವ ತುರ್ತು ಸೇವಾ ವಾಹನಕ್ಕೆ ಸಂದೇಶವನ್ನು ರವಾನಿಸಿ ಘಟನಾ ಸ್ಥಳಕ್ಕೆ ಕಳುಹಿಸಲಾಗುವುದು. ವಾಹನ ಆಗಮಿಸುತ್ತಿರುವ ಬಗ್ಗೆ ಮಾಹಿತಿಯನ್ನು ದೂರವಾಣಿ ಮಾಡಿದವರಿಗೆ ಎಸ್‍ಎಂಎಸ್ ಮೂಲಕ ನೀಡಲಾಗುವುದು ಎಂದು ಹೇಳಿದರು.

ಪ್ರತಿ ವಾಹನದಲ್ಲಿ ಒಬ್ಬರು ಅಧಿಕಾರಿ ಮತ್ತು ಸಿಬ್ಬಂದಿ ಇದ್ದು, ಘಟನಾ ಸ್ಥಳಕ್ಕೆ ತಕ್ಷಣ ತೆರಳಿ ಕ್ರಮ ಜರುಗಿಸಲು ಇದರಿಂದ ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಅಂಬುಲೆನ್ಸ್ ಸೇವೆಯನ್ನು ಸಹ ಇದರಡಿ ತರಲಾಗುವುದು. ಇದುವರೆಗೆ ಪೊಲೀಸ್ ಠಾಣೆ ಇಲ್ಲದ ಕಡೆಗಳಲ್ಲಿ ಪೊಲೀಸ್ ಹೊರಠಾಣೆಯನ್ನು ಸ್ಥಾಪಿಸಲಾಗುತ್ತಿತ್ತು. ಡಯಲ್-112 ಮೊಬೈಲ್ ಹೊರಠಾಣೆಯಾಗಿ ಕಾರ್ಯನಿರ್ವಹಿಸಲಿದೆ. ಯಾವುದೇ ರೀತಿಯ ಅಪರಾಧ ಕೃತ್ಯಗಳು ಅಥವಾ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಘಟನೆಗಳು ನಡೆದ ತಕ್ಷಣ ಸಾರ್ವಜನಿಕರು ಇನ್ನು ಮುಂದೆ 112 ಸಂಖ್ಯೆಗೆ ಕರೆ ಮಾಡಿ ಮಾಹಿತಿಯನ್ನು ನೀಡಬೇಕು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಒಟ್ಟು 18 ತುರ್ತು ಸ್ಪಂದನ ವಾಹನಗಳನ್ನು ನೀಡಲಾಗಿದೆ. ಶಿವಮೊಗ್ಗ ಉಪವಿಭಾಗದಲ್ಲಿ 6, ಭದ್ರಾವತಿ, ಸಾಗರ, ಶಿಕಾರಿಪುರ, ತೀರ್ಥಹಳ್ಳಿ ಉಪವಿಭಾಗಗಳಲ್ಲಿ ತಲಾ 3 ವಾಹನಗಳನ್ನು ಒದಗಿಸಲಾಗಿದೆ. 112 ಆಪ್ ಸಹ ಅಭಿವೃದ್ಧಿಪಡಿಸಲಾಗಿದ್ದು, ಟ್ವಿಟರ್ ಹ್ಯಾಂಡಲ್ ಸಿದ್ಧಪಡಿಸಲಾಗುವುದು. ನಗರ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಡಯಲ್ 112 ಯೋಜನೆ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ನೆರವಾಗಲಿದೆ ಎಂದು ಹೇಳಿದರು.

See also  ಮಡಿಕೇರಿ-ಸಂಪಾಜೆ ರಸ್ತೆ ಮಾರ್ಗ ಸರಿಪಡಿಸಲು 58 ಕೋಟಿ ರೂ. ಮಂಜೂರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು