News Kannada
Wednesday, September 28 2022

ಕರ್ನಾಟಕ

ಮಂಡ್ಯ ನಗರವನ್ನು ಮಹಾನಗರಪಾಲಿಕೆಯನ್ನಾಗಿಸುವುದೇ ಗುರಿ - 1 min read

Photo Credit :

ಮಂಡ್ಯ ನಗರವನ್ನು ಮಹಾನಗರಪಾಲಿಕೆಯನ್ನಾಗಿಸುವುದೇ ಗುರಿ

ಮಂಡ್ಯ: ಜನಸಂಖ್ಯೆ ಆಧಾರದ ಮೇಲೆ ಮಹಾನಗರ ಪಾಲಿಕೆಯನ್ನಾಗಿ ಮಾಡಬೇಕಾಗಿರುವುದರಿಂದ ಸದ್ಯಕ್ಕೆ ನಮ್ಮ ಮಂದಿರುವುದು ಮಂಡ್ಯವನ್ನು ಸ್ಮಾರ್ಟ್ ಸಿಟಿ ಮಾಡಬೇಕೆಂಬುದೇ ನಮ್ಮ ಗುರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.

ಮಂಡ್ಯವನ್ನು ಸ್ಮಾರ್ಟ್ ಸಿಟಿ ಮಾಡಲು ಬಜೆಟ್‍ನಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು. ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಕನಿಷ್ಠ 25 ಎಕರೆ ಸ್ಥಳ ಬೇಕಾಗಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಜೆಟ್‍ನಲ್ಲಿ ಮುಖ್ಯವಾಗಿ ಮೈಷುಗರ್ ಕಾರ್ಖಾನೆ ಪ್ರಾರಂಭಕ್ಕೆ ಹಣ ಬಿಡುಗಡೆ ಮಾಡಲು ಸಿ.ಎಂ. ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು.

ಖಾಸಗಿಯಾದರೂ ಸರಿ ಸರ್ಕಾರಿ ಸ್ವಾಮ್ಯದಲ್ಲಾದರೂ ಸರಿ ಒಟ್ಟಾರಿ ಕಾರ್ಖಾನೆ ಪ್ರಾರಂಭ ಮಾಡಬೇಕೆಂಬುದೇ ನಮ್ಮ ಗುರಿ ಎಂದರು. ಮೈಷುಗರ್ ಕಾರ್ಖಾನೆ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಅವುಗಳನ್ನೆಲ್ಲ ತೆರವುಗೊಳಿಸಿ ಮೈಷುಗರ್ ಆಸ್ತಿಯನ್ನು ರಕ್ಷಣೆ ಮಾಡುವುದಾಗಿ ಹೇಳಿದರು. ಕೇಂದ್ರ ಬಜೆಟ್‍ನಲ್ಲಿ 33 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದ್ದು, 1,197 ಕಿ.ಮೀ. 10,904 ಕೋಟಿ ಬಿಡುಗಡೆ, 2021-22 ರಲ್ಲಿ ಕರ್ನಾಟಕದಲ್ಲಿ 1,16,144 ಕೋಟಿ ರೂ.ನ ಮೂಲ ಸೌಕರ್ಯ ವ್ಯವಸ್ಥೆ ನಿರ್ಮಾಣ 2ನೇ ಹಂತದ ಬೆಂಗಳೂರು ಮೆಟ್ರೋ ನಿರ್ಮಾಣ ಕಾಮಗಾರಿಗೆ 14,788 ಕೋ.ರೂ. ಬಿಡುಗಡೆ, ಬೆಂಗಳೂರು ಉಪನಗರ ಯೋಜನೆಗೆ 23,093 ಕೋಟಿ ರೂ. ಬಿಡುಗಡೆ  ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳಿಗೆ 4,870 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ತುಮಕೂರು 7,725 ಕೋಟಿ ರೂ. ವೆಚ್ಚದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣ, ಈ ಮೂಲಕ 2.8 ಲಕ್ಷ ಉದ್ಯೋಗವಕಾಶ ಲಭಿಸಿದೆ. ಬೆಂಗಳೂರು-ಮಂಗಳೂರಿಗೆ ಸಂಪರ್ಕ ಕೊಂಡಿಯಾಗಿರುವ ಶಿರಾಡಿಯ ಮಾರ್ಗ ನಿರ್ಮಾಣಕ್ಕೆ ಅನುಮೋದನೆ 13 ಕಿ.ಮೀ. ಉದ್ದದ 6 ಸುರಂಗ ಮಾರ್ಗ 1.5 ಕಿ.ಮೀ. ಉದ್ದದ 10 ಸೇತುವೆಗಳಿಗೆ ವೆಚ್ಚ 10 ಕೋಟಿ ಬಿಡುಗಡೆ ಮಾಡಲಾಗಿದೆ.

ರೈತರ ಕಲ್ಯಾಣಕ್ಕೆ ಬದ್ದವಾದ ಬಜೆಟ್: ಹಳ್ಳಿಗಳಲ್ಲಿ ಆಸ್ತಿ ಮಾಲೀಕರಿಗೆ ಹಕ್ಕು ಪತ್ರ ನೀಡು ಸ್ವಾಮಿತ್ವ ಯೋಜನೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಣೆ ಮಾಡಲಾಗಿದೆ ಎಂದರು. ಕೃಷಿ ಸಾಲ ವಿತರಣೆಯ ಗುರಿ 16.5 ಕೋಟಿ ರೂ. ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಹೆಚ್ಚಿನ ಸಾಲ ಸೌಲಭ್ಯ, ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿದಿಗೆ 40,000 ಕೋಟಿ ರೂ. ಏರಿಕೆ ಮಾಡಿರುವುದು ಉತ್ತಮ ಬೆಳವಣಿಗೆ ಎಂದರು.

ಎಪಿಎಂಸಿ ಬಲವರ್ಧನೆಗೆ ಸಂಕಲ್ಪ ಕೃಷಿ ಮೂಲ ಸೌಕರ್ಯ ನಿಧಿ ಬಳಕೆಗೆ ಅನುಮತಿ, 1000 ಎಪಿಎಂಸಿ ಮಂಡಿಗಳನ್ನು ಎಲೆಕ್ಟ್ರಾನಿಕ್ ರಾಷ್ಟ್ರೀಯ ಮಾರುಕಟ್ಟೆ ವ್ಯವಸ್ಥೆಗೆ ಸಂಯೋಜಿಸಲು ಅನುಮತಿ ನರೇಗಾ ಯೋಜನೆಗೆ 73.000 ಕೋರಿ ರೂ.  ಗುತ್ತಿಗೆ ಕಾರ್ಮಿಕರ ಮತ್ತು ಇತರ ಕಾರ್ಮಿಕರಿಗೂ ಸಾಮಾಜಿಕ ಭದ್ರತಾ ಸೌಲಭ್ಯದ ವಿಸ್ತರಣೆ ಮಾಡಲಾಗಿದೆ ಎಂದರು. ಶುದ್ದ ನೀರು ಮತ್ತು ಮಿಷನ್ ಘೋಷಣ್ -2 ಅಡಿ 112 ಜಿಲ್ಲೆಗಳಲ್ಲಿ ಯೋನೆಯನ್ನು ಅನುಷ್ಠಾನ ಗೊಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ 24,435 ಕೋ ರೂ. ಶೇ.18 ರಷ್ಟು ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು. ದೇಶದಾದ್ಯಂತ ಎಲ್ಲ ಗ್ರಾಮೀಣ ಮನೆಗಳಿಗೆ 2024ರೊಳಗೆ 2.87 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಕೊಳವೆ ನೀರು ಪೂರೈಕೆ ಮಾಡಲಾಗುವುದು ಎಂದರು.

See also  ಶಿವಕುಮಾರ ಸ್ವಾಮೀಜಿಗಳ ಲಿಂಗಶರೀರದ ಕ್ರಿಯಾ ಸಮಾಧಿ ವಿಧಿವಿಧಾನ ಆರಂಭ

ಮಾಜಿ ಸಚಿವ ಎ.ಮಂಜು ಮಾತನಾಡಿ, ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿದೆ. ಈ ಬಗ್ಗೆ ಮುಖ್ಯಮಂತ್ರಿಗೆ ಮನದಟ್ಟು ಮಾಡಿಕೊಡುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿಗಳು ಸ್ವತಃ ಮಂಡ್ಯ ಜಿಲ್ಲೆಯವರೇ ಆಗಿರುವುದರಿಂದ ನಿರೀಕ್ಷೆ ಇದೆ ಎಂದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮುಡಾ ಅಧ್ಯಕ್ಷ ಶ್ರೀನಿವಾಸ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕಾಡೇನಹಳ್ಳಿ ನಾಗಣ್ಣಗೌಡ, ರೈತ ಮುಖಂಡ ನಂಜುಂಡೇಗೌಡ ಮತ್ತಿತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು