News Kannada
Saturday, October 01 2022

ಕರ್ನಾಟಕ

ಸಿಬ್ಬಂದಿ ಕೊರತೆ ನೆಪ ಹೇಳದೆ ಕೆಲಸ ಮಾಡಿ: ಸಚಿವ ಪ್ರಭು ಚವ್ಹಾಣ್ - 1 min read

Photo Credit :

ಸಿಬ್ಬಂದಿ ಕೊರತೆ ನೆಪ ಹೇಳದೆ ಕೆಲಸ ಮಾಡಿ: ಸಚಿವ ಪ್ರಭು ಚವ್ಹಾಣ್

ಮಂಡ್ಯ: ಸಿಬ್ಬಂದಿ ಕೊರತೆ ನೆಪ ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳಬೇಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳ ಮೇಲೆ ಸಿಡಿಮಿಡಿಗೊಂಡರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ ಸಚಿವರು ಪಶುಸಂಗೋಪನೆ ಇಲಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಿಬ್ಬಂದಿ ಕೊರತೆ ಇರುವುದು ನನ್ನ ಗಮನಕ್ಕೆ ಇದೆ ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.

ಇದ್ದ ಸಂಪನ್ಮೂಲದಲ್ಲಿ ಸದ್ಯ ಕಾರ್ಯನಿರ್ವಹಿಸುವ  ಸವಾಲು ನಮ್ಮ ಮುಂದಿದೆ. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಪಶುಪಾಲನೆ ಮೇಲೆ ಬಹಳಷ್ಟು ಕುಟುಂಬಗಳು ಅವಲಂಬಿತವಾಗಿವೆ. ಪಶುಪಾಲಕರ ಬಹುದೊಡ್ಡ ಶಕ್ತಿಯೆಂದರೆ ಪಶುವೈದ್ಯರು ನೀವು ಮೂಕ ಪ್ರಾಣಿಗಳ ನೋವನ್ನು ಅರ್ಥಮಾಡಿಕೊಂಡು ಅವುಗಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿ ಎಂದು ಅಧಿಕಾರಿಗಳಿಗೆ ಸಚಿವರು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿರುವುದರಿಂದ ಕೋಳಿ, ಕುರಿಗಳ ಮಾಂಸ ಉತ್ಪಾದನೆಗೆ ಜಿಲ್ಲಾ ಮಟ್ಟದಲ್ಲಿ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹೆಚ್ಚು ಗಮನಹರಿಸಿ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಗೋಮಾಳಗಳನ್ನು ಗುರುತಿಸಿ ಗೋಶಾಲೆಗಳ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು ಸಹಕರಿಸಬೇಕು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ಗಂಡುಕರುಗಳನ್ನು ರೈತರು ಹಾಗೆ ಸಂತೆಗಳಲ್ಲಿ ಬಿಡುತ್ತಿರುವುದು ಗಮನಕ್ಕೆ ಬಂದಿದೆ. ಇಲಾಖೆಯ ಅಧಿಕಾರಿಗಳು ರೈತರೊಂದಿಗೆ ಸಮಾಲೋಚನೆ ನಡೆಸಿ ಕನಿಷ್ಠ ಮೂರು ತಿಂಗಳುಗಳ ವರೆಗೆ ಗಂಡು ಕರುಗಳನ್ನು ಸಾಕಿ ಗೋಶಾಲೆಗಳಿಗೆ ಬಿಡಲು ರೈತರಿಗೆ ಮನವಲಿಸಲು ಪ್ರಯತ್ನ ಮಾಡಿ ಎಂದು ಸಚಿವರು ಹೇಳಿದರು.

ಈ ನಡುವೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಸಚಿವ ಪ್ರಭು ಚವ್ಹಾಣ್ ಅವರು ರಾಜ್ಯದಲ್ಲಿ ಪ್ರಾಣಿಗಳ ಕಲ್ಯಾಣ ಮಂಡಳಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ರಾಜ್ಯದ 15 ಜಿಲ್ಲೆಗಳಿಗೆ ಸುಸಜ್ಜಿತವಾದ ಸಂಚಾರಿ ಸುಸಜ್ಜಿತ ಪಶು ಶಾಸ್ತ್ರ ಚಿಕಿತ್ಸಾ ವಾಹನ ಆಂಬುಲೆನ್ಸ್  ನೀಡಲಾಗಿದೆ. ಎಲ್ಲ ತುರ್ತು ಸಮಯದಲ್ಲಿ ಆಂಬುಲೆನ್ಸ್ ಸೇವೆ ಲಭ್ಯವಾಗುತ್ತದೆ. ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ ತರುವುದರಿಂದ ರೈತರಿಗೆ ಇದರಿಂದ ತುಂಬಾ ಅನುಕೂಲ ಆಗಿದೆ. ರೈತರು ಜಾನುವಾರುಗಳ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸಹಕಾರಿಯಾಗಿದೆ. ಅತ್ಯಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ವಿಶೇಷವಾದ ಪಶು ಸೇವಾ ಸೌಲಭ್ಯಗಳಿವೆ. ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಇರುವುದು ವಿಶೇಷ. ತುರ್ತು ಚಿಕಿತ್ಸಾ ಘಟಕವಿದೆ. ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳಿವೆ ಎಂದರು.

See also  ಕಾಂಗ್ರೆಸ್ ಶಾಸಕರಲ್ಲಿ ಮತ್ತೆ ಹೊರಬಿದ್ದ ಅಸಮಾಧಾನದ ಹೊಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು