News Kannada
Wednesday, October 05 2022

ಕರ್ನಾಟಕ

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ವಿಜೃಂಭಣೆಯ ಬ್ರಹ್ಮರಥೋತ್ಸವ - 1 min read

Photo Credit :

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ವಿಜೃಂಭಣೆಯ ಬ್ರಹ್ಮರಥೋತ್ಸವ

ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧವಾದ ಪುಣ್ಯಕ್ಷೇತ್ರ ಗೌತಮ ಮುನಿಗಳ ತಪೋಭೂಮಿಯಾದ ಅಕ್ಕಿಹೆಬ್ಬಾಳು ಗ್ರಾಮದ ಆರಾಧ್ಯದೈವ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವವು ಶನಿವಾರ ಸಡಗರ ಸಂಭ್ರಮಗಳೊಂದಿಗೆ ಅದ್ಧೂರಿಯಾಗಿ ಜರುಗಿತು.

ಮುಜರಾಯಿ ಅಧಿಕಾರಿಗಳು ಹಾಗೂ ಪಾಂಡವಪುರ ಉಪವಿಭಾಗಾಧಿಕಾರಿ  ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್ ಎಂ.ಶಿವಮೂರ್ತಿ, ರಾಜಸ್ವನಿರೀಕ್ಷಕ ರಾಮಚಂದ್ರ, ಅಕ್ಕಿಹೆಬ್ಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಕ್ಷಿತಾದಿನೇಶ್ ಮತ್ತು ತಾಲೂಕು ಪಂಚಾಯಿತಿ ಸದಸ್ಯೆ ವಿನುತಾಸುರೇಶ್ ಅವರು ಶ್ರೀ ರಥದಲ್ಲಿ ವಿರಾಜಮಾನವಾಗಿದ್ದ ಸ್ವಾಮಿಯವರ ಉತ್ಸವಮೂರ್ತಿಗೆ ಸಾಂಪದಾಯಿಕ ಪೂಜೆಯನ್ನು ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಹಾಗೂ ವಿಪ್ರ ಬಾಂಧವರು ಗೋವಿಂದ, ನಾರಸಿಂಹ, ಶ್ರೀ ಲಕ್ಷ್ಮೀನೃಸಿಂಹ ಎಂದು ಜಯಘೋಷಗಳನ್ನು ಕೂಗಿ ರಥೋತ್ಸವದ ಸಂಭ್ರಮಕ್ಕೆ ವಿಶೇಷವಾದ ಕಳೆಯನ್ನು ತಂದರು. ನವ ವಧೂವರರು ಹಾಗೂ ಭಕ್ತರು ಶ್ರೀ ರಥದ ಕಳಸಕ್ಕೆ ಹಣ್ಣುಜವನವನ್ನು ಎಸೆದು ಕೃತಾರ್ಥರಾದರು. ಕೊರೋನಾ ಸಂಕಷ್ಟದ ನಡುವೆಯೂ ನಾಡಿನ ವಿವಿಧ ಭಾಗಗಳಿಂದ 10ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಭಾಗವಹಿಸಿದ್ದುದು ವಿಶೇಷವಾಗಿತ್ತು.

See also  ಮಲ್ಪೆ ಮೂಲದ ಬೋಟ್ ಮಹಾರಾಷ್ಟ್ರದಲ್ಲಿ ಮುಳುಗಡೆ: ಏಳು ಮೀನುಗಾರರ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು