News Kannada
Wednesday, December 07 2022

ಕರ್ನಾಟಕ

ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರಚೀಟಿ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ 

Photo Credit :

ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರಚೀಟಿ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಸೂಚನೆ 

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಅನರ್ಹರ ಕುಟುಂಬಗಳ ಸದಸ್ಯರ ಜೊತೆಗೆ ಸರ್ಕಾರಿ ಸೌಮ್ಯದ ಎಲ್ಲಾ ನೌಕರರು, ಸಿಬ್ಬಂದಿಗಳು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಕಟ್ಟುವವರು, ಅನ್ನ ಮತ್ತು ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲವೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಕೆಲವು ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರಚೀಟಿ ಹೊಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪಡಿತರ ಚೀಟಿದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ.

ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ,

ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000ಚ.ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು,

ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮುಂತಾದ ಒಂದು ವಾಣಿಜ್ಯ ವಾಹನವನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯವು ರೂ.1.20ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳ ಸದಸ್ಯರು ಪಡಿತರ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ.

See also  ಡಿವೈಎಸ್ಪಿ ಗಣಪತಿ ಪ್ರಕರಣ: ಸಿಬಿಐಗೆ ನೀಡದಿದ್ದರೆ ಹೋರಾಟ ತೀವ್ರ, ಜೆಡಿಎಸ್ ಎಚ್ಚರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು