News Kannada
Monday, December 05 2022

ಕರ್ನಾಟಕ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಅರಿವು ಅಗತ್ಯ

Photo Credit :

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಅರಿವು ಅಗತ್ಯ

ಬೆಂಗಳೂರು ಗ್ರಾಮಾಂತರ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಬಗ್ಗೆ ಯುವಜನತೆ ಅರಿವು ಹೊಂದುವುದು ಅಗತ್ಯವಾಗಿದೆ ಎಂದು ದೊಡ್ಡಬಳ್ಳಾಪುರದ ತಹಶೀಲ್ದಾರ್ ಶಿವರಾಜ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಸಿ.ಸಿ., ಎನ್.ಎಸ್.ಎಸ್., ವೈ.ಆರ್.ಸಿ. ಘಟಕಗಳ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ಪಟ್ಟಣದ ಕೊಂಗಾಡಿಯಪ್ಪ ಪದವಿ ಕಾಲೇಜಿನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ಪರಕೀಯರ ಆಡಳಿತವನ್ನು ಕೊನೆಗಾಣಿಸಿ, ಲಕ್ಷಾಂತರ ಹೋರಾಟಗಾರರು ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ ಎಂದರಲ್ಲದೆ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ನಾವೆಲ್ಲರೂ ಇಂದು ಉತ್ತಮ ಸ್ಥಿತಿಯಲ್ಲಿದ್ದೇವೆ. ಅವರು ಕಷ್ಟಗಳನ್ನು ಎದುರಿಸಿ, ನಮಗೆ ಸಂತೋಷನ್ನು ನೀಡಿದ್ದಾರೆ ಎಂದರು.

ಯುವ ಜನತೆ ತಾವು ತೊಡಗಿಸಿಕೊಳ್ಳುವ ಕ್ಷೇತ್ರದಲ್ಲಿ ಅಸಾಧಾರಣ ಪ್ರಗತಿ ಸಾಧಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರಲ್ಲದೆ, ನಮ್ಮ ದೇಶ ಎಂಬ ಅಭಿಮಾನ ಎಲ್ಲರಲ್ಲೂ ಮೂಡಬೇಕು ಹಾಗೂ ಮುಂದಿನ ಪೀಳಿಗೆಗೂ ದೇಶಭಕ್ತಿ ಭಾವ ಮುಂದುವರಿಸಬೇಕು ಎಂದು ಯುವಜನತೆಗೆ ಸಲಹೆ ನೀಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮಹಾತ್ಮರನ್ನು ನೆನಪಿಸಿಕೊಳ್ಳಲು ಇರುವ ಸುದಿನವಾಗಿದ್ದು, ಯುವಜನತೆ ದೇಶಭಕ್ತಿ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.  ಕೊಂಗಾಡಿಯಪ್ಪ ಪದವಿ ಪ್ರಾಂಶುಪಾಲ ಮೇಜರ್ ತಜ್ಮುಲ್ ಪಾಷಾ, ದೊಡ್ಡಬಳ್ಳಾಪುರ ನಗರಸಭೆ ಆಯುಕ್ತ ವೀರಣ್ಣ, ಬೆಸ್ಕಾಂ ಎ.ಇ.ಇ. ಭಾಸ್ಕರ್, ರೇಷ್ಮೆ ಇಲಾಖೆ ಅಧಿಕಾರಿ ಮುನಿರಾಜು ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ನಿವೃತ್ತ ಪ್ರಾಧ್ಯಾಪಕ ಎಂ.ಜಿ.ಚಂದ್ರಶೇಖರಯ್ಯ ಅವರು ಉಪನ್ಯಾಸ ನೀಡಿದರು.

See also  ಭೀಕರ ರಸ್ತೆ ದುರಂತ: ಮದುವೆ ಚಿತ್ರೀಕರಣ ಮುಗಿಸಿ ವಾಪಾಸ್ಸಾಗುತ್ತಿದ್ದ ಮೂವರು ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು