News Kannada
Saturday, November 26 2022

ಕರ್ನಾಟಕ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ - 1 min read

Photo Credit :

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಒಂದು ವಾರದ ಅವಧಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲಿಸುವುದು ಸೇರಿದಂತೆ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಲ್ಲಿ ಪಾಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯAತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹಿಸದೆ ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ಅವರು ಹೇಳಿದರು.

ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ 1.63ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.

ಗಾಬರಿ ಅಗತ್ಯವಿಲ್ಲ: ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದ್ದು, ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಸ್ತುತ 2200 ಮಂದಿಯ ಕರೋನಾ ತಪಾಸಣೆ ನಡೆಸಲಾಗುತ್ತಿದ್ದು, ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ. ನೆರೆಯ ಜಿಲ್ಲೆಗಳಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿದರೆ ಮಾತ್ರ ಕರೋನಾ ನಿಯಂತ್ರಣದಲ್ಲಿಡಬಹುದಾಗಿದೆ. ಜನರು ನಿರ್ಲಕ್ಷö್ಯ ಮಾಡಿದರೆ ಮುಂದಿನ ದಿನಗಳಲ್ಲಿ ಸಂಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಅವರು ಹೇಳಿದರು.

ಮೂಲಸೌಕರ್ಯ ಮೇಲ್ದರ್ಜೆಗೆ: ಪ್ರಸ್ತುತು ಕೋವಿಡ್ ಪ್ರಕರಣಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಸಜ್ಜಿತ ಐಸಿಯು, 11ಸಾವಿರ ಕೆಎಲ್ ಆಕ್ಸಿಜನ್ ಘಟಕ ಮಾತ್ರವಲ್ಲದೆ ಹೆಚ್ಚುವರಿಯಾಗಿ 6ಸಾವಿರ ಕೆಎಲ್ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಎಪಿಎಂಸಿಯAತಹ ಸ್ಥಳಗಳಲ್ಲಿ ರ‍್ಯಾಂಡಮ್ ಆಗಿ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕೋವಿಡ್ ಲಸಿಕೆ ಕಾರ್ಯಕ್ರಮ: ಜಿಲ್ಲೆಯಲ್ಲಿ ಇದುವರೆಗೆ 18041 (ಶೇ.85) ಆರೋಗ್ಯ ಕಾರ್ಯಕರ್ತೆಯರಿಗೆ ಪ್ರಥಮ ಡೋಸ್ ಹಾಗೂ ಶೇ.53ರಷ್ಟು ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಶೇ.63ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್, 60ವರ್ಷ ಮೇಲ್ಪಟ್ಟ 58814 ಮಂದಿಗೆ ಹಾಗೂ 45ವರ್ಷ ಮೇಲ್ಪಟ್ಟ 1470 ಮಂದಿಗೆ ಲಸಿಕೆ ನೀಡಲಾಗಿದೆ.
ಜಿಲ್ಲೆಗೆ 11560 ಕೋವ್ಯಾಕ್ಸಿನ್ ಸರಬರಾಜಾಗಿದ್ದು 4200 ಖರ್ಚಾಗಿದೆ. 128000 ಕೋವಿಶೀಲ್ಡ್ ಸರಬರಾಜಗಿದ್ದು 91904 ಬಳಕೆಯಾಗಿದೆ. ಒಟ್ಟು 173 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಉಪಕೇಂದ್ರಗಳು, ಪಿಎಚ್‌ಸಿ, ಸಿಎಚ್‌ಸಿ, ತಾಲೂಕು ಆಸ್ಪತ್ರೆ, ಶಿಮ್ಸ್, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಮ್ಮ ಗುರುತಿನ ಚೀಟಿಯೊಂದಿಗೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

See also  ರಾಮನಗರ ಕೆಡಿಪಿ ಸಭೆಯಲ್ಲಿ ಮುಖಾಮುಖಿಯಾದ ವಿರೋಧಿಗಳು

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾOತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು