News Kannada
Monday, November 28 2022

ಕರ್ನಾಟಕ

ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ಮನೆಯಲ್ಲಿ ನೇಣಿಗೆ ಶರಣು - 1 min read

Photo Credit :

ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ಮನೆಯಲ್ಲಿ ನೇಣಿಗೆ ಶರಣು

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಸಾರಿಗೆ ನೌಕರ ಶಿವಕುಮಾರ್ ನೀಲಗಾರ(40) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿದ್ದ ಶಿವಕುಮಾರ್ ನೀಲಗಾರ ಆತ್ಮಹತ್ಯೆಗೆ ಶರಣಾದ ನೌಕರ. ಇವರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದರು. ಇನ್ನು ಇಂದು ಮುಷ್ಕರ ನಿರತ ಸಾರಿಗೆ ನೌಕರರು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಸವದತ್ತಿಗೆ ಆಗಮಿಸಲಿದ್ದಾರೆ.

ಸಂಬಳ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಸರ್ಕಾರಿ ಸಾರಿಗೆ ನೌಕರರು ಕರ್ನಾಟಕಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಈ ಹಿಂದೆಯೂ ಇದೇ ರೀತಿ ಮುಷ್ಕರ ಕೈಗೊಂಡಿದ್ದರು. ಸಂಬಳ ಹೆಚ್ಚಳಕ್ಕಾಗಿ ಸಾರಿಗೆ ನೌಕರರು ಪಡುತ್ತಿರುವ ಕಷ್ಟುಗಳು ಒಂದೆರೆಡಲ್ಲ. ಜೊತೆಗೆ ಸರ್ಕಾರ ಸರಿಯಾಗಿ ಸಂಬಳ ನೀಡುತ್ತಿಲ್ಲ. ಅವಧಿಗೂ ಮೀರಿ ಕೆಲಸ ಕೊಡುತ್ತಿದ್ದಾರೆ. ರಜೆಗಳು ಸರಿಯಾಗಿ ಕೊಡಲ್ಲ ಎಂಬ ಅನೇಕ ಆರೋಪಗಳಿವೆ.ಇವೆಲ್ಲವನ್ನೂ ಸಹಿಸಿಕೊಂಡು ಸಾರಿಗೆ ನೌಕರರು ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಕಡಿಮೆ ಸಂಬಳದಿಂದ ಮನೆ ನಿಭಾಹಿಸುವುದು ನಿಜಕ್ಕೂ ಕಷ್ಟದ ಸಂಗತಿ. ಈ ಹಿಂದೆ ಸಹ ಅನೇಕ ಸಮಸ್ಯೆಗಳನ್ನು ಹೇಳಿಕೊಂಡು ಸಾರಿಗೆ ನೌಕರರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ನೋಡುತ್ತಿದ್ದೇವೆ. ಆದರೆ ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೀಡಿದ್ದಾರೆ ಎಂದು ಶಿವಕುಮಾರ್ ನೀಲಗಾರ ಆತ್ಮಹತ್ಯೆ ಮಾಡಿಕೊಂಡಿದ್ದಾರಂತೆ. ಆದರೆ ಈ ರೀತಿ ಕಿರುಕುಳ ನೀಡುವುದು ಎಷ್ಟು ಸರಿ? ಸರ್ಕಾರ ಆದಷ್ಟು ಬೇಗ ಕಣ್ಣು ತೆರೆದು ಸಾರಿಗೆ ನೌಕರರ ಬೇಡಿಕೆಯನ್ನು ಪೂರೈಸಬೇಕಿದೆ. ನೊಂದ ಜೀವಗಳಿಗೆ ಸಾಂತ್ವನ ಹೇಳಬೇಕಿದೆ.

See also  ನೆರೆ ಪರಿಹಾರಕ್ಕೆ 24 ಗಂಟೆಯಲ್ಲಿ ಕ್ರಿಯಾಯೋಜನೆ ನೀಡಿ: ಮನೀಷ್ ಮೌದ್ಗಿಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು